ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ; ಮೂರು ತಿಂಗಳಲ್ಲಿ 9ನೇ ಪ್ರಕರಣ:

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ನಿನ್ನೆಯೂ ತನ್ನ ದ್ವಿಚಕ್ರ ವಾಹನಕ್ಕೆ ದಾರಿ ಬಿಡಲಿಲ್ಲ ಎಂದು ದ್ವಿಚಕ್ರ ವಾಹನ ಸವಾರನೊಬ್ಬ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ವರದಿಯಾಗಿದೆ. ಬಸ್ ಚಾಲಕ ಕುಶಾಲ್ ಕುಮಾರ್ ನೀಡಿರುವ ದೂರು ಆಧರಿಸಿ, ಹಲ್ಲೆ ನಡೆಸಿದ ದ್ವಿಚಕ್ರ ವಾಹನ ಸವಾರ ಮೊಹಮ್ಮದ್ ಫೈಜಲ್ ಎಂಬಾತನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ಮೂರನೇ ಬಾರಿಗೆ ಹಲ್ಲೆ ನಡೆಸಿರುವ ಪ್ರಕರಣ ಇದಾಗಿದ್ದು ಮೂರು ತಿಂಗಳಲ್ಲಿ ಬಿಎಂಟಿಸಿ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ ಒಂಬತ್ತು ಪ್ರಕರಣಗಳು ವರದಿಯಾಗಿವೆ.

ಮೆಜೆಸ್ಟಿಕ್ನಿಂದ ಸಿ.ಕೆ. ಪಾಳ್ಯ ಕಡೆಗೆ ಹೊರಟಿದ್ದ ಬಸ್ ಅನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ದ್ವಿಚಕ್ರ ವಾಹನ ಸವಾರ ತಡೆದಿದ್ದಾನೆ. ಮುಂದೆ ಸಾಗಲು ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಚಾಲಕನಿಗೆ ಹೊಡೆದಿದ್ದಾನೆ. ಇದನ್ನು ಪ್ರಶ್ನಿಸಿದ ನಿರ್ವಾಹಕ ಕೃಷ್ಣ ಅವರ ಮೇಲೂ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ವಾಹನ ಚಾಲಕನೊಬ್ಬ ಈತನಿಗೆ ಕುಮ್ಮಕ್ಕು ನೀಡಿದ್ದಾನೆ.ಹಲ್ಲೆ ನಡೆಸಿದ ಮೊಹಮ್ಮದ್ ಫೈಜಲ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರ ಮೇಲೆ ಪದೇ ಪದೇ ಹಲ್ಲೆ ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರಿಗೆ ಪತ್ರ ಬರೆದಿದ್ದರು.

More articles

Latest article

Most read