ಕಳ್ಳತನ ಮಾಡಿ ಬಂಧನ ಬೀತಿಯಿಂದ 15 ದಿನ ಕಾರಿನಲ್ಲೇ ಸುತ್ತಾಡಿದ್ದ ಆರೋಪಿಗಳು

Most read

ಬೆಂಗಳೂರು: ಮನೆ ಮಾಲೀಕರು ತೀರ್ಥಯಾತ್ರೆಗೆ ಎಂದು ತೆರಳಿದ್ದಾಗ ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳು ಬಂಧನ ಭೀತಿಯಿಂದ ಸತತ 15 ದಿನಗಳ ಕಾಲ ಸಾವಿರಾರು ಕಿಲೋಮೀಟರ್ ಸಂಚರಿಸಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ದೀಪಕ್ ಹಾಗೂ ಪವನ್ ಬಂಧಿತ ಆರೋಪಿಗಳು. ಇವರಿಂದ ವಿದ್ಯಾರಣ್ಯಪುರ ಠಾಣೆ ಪೊಲೀಸರು, ಚಿನ್ನಾಭರಣ, ಎರಡು ಕಾರು ಹಾಗೂ ಆರು ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ರೂ. 41.36 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳ್ಳತನ ಪ್ರಕರಣದ ದೂರು ದಾಖಲಾದ ನಂತರ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು. ಲಾಡ್ಜ್ನಲ್ಲಿ ತಂಗಿದ್ದರೆ ಪೊಲೀಸರ ಕೈಗೆ ಸಿಕ್ಕಿ ಬೀಳಬಹುದೆಂಬ ಕಾರಣದಿಂದ ಇಬ್ಬರೂ 15 ದಿನ 12 ಸಾವಿರ ಕಿ.ಮೀ. ಪ್ರಯಾಣ ಮಾಡಿ ಕಾರಿನಲ್ಲೇ ಸಂಚರಿಸುತ್ತಾ ಕಾರಿನಲ್ಲೇ ವಾಸ್ತವ್ಯ ಹೂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಇವರ ಬಂಧನದಿಂದ 7 ಮನೆಗಳ್ಳತನ ಹಾಗೂ 13 ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಇವರು ಸಂಜೆ ವೇಳೆ ದೀಪ ಉರಿಯುವ ಮನೆಗಳನ್ನು ಗುರುತಿಸಿಕೊಳ್ಳುತ್ತಿದ್ದರು. ನಂತರ ಬೆಳಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ಆಗಮಿಸಿ ಕಳ್ಳತನ ಮಾಡುತ್ತಿದ್ದರು. ಇವರ ಜತೆಯಿದ್ದ ಮತ್ತೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು ಹುಟುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article