ಬಳ್ಳಾರಿ ಜಿಲ್ಲೆಯ ಸಂಡೂರು ಎಸ್ ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ತುಕಾರಾಂ ಮತ್ತು ಬಿಜೆಪಿಯಿಂದ ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ 1,18,279 ಮಹಿಳಾ 1,17,739 ಪುರುಷ ಸೇರಿ ಒಟ್ಟು 2,36,047 ಮತದಾರರಿದ್ದಾರೆ. ಎಸ್ ಸಿ( 41,676), ಎಸ್ ಟಿ (59,312), ಲಿಂಗಾಯತ (30,024), ಕುರುಬ (24,701), ಮುಸ್ಲಿಂ (24,588), ಹಿಂದುಳಿದ ವರ್ಗ(41,506) ಮತ್ತು ಇತರೆ ಸಮುದಾಯಗಳ 15,000 ಮತದಾರರಿದ್ದಾರೆ. ಮೀಸಲು ಕ್ಷೇತ್ರವಾದ ಇಲ್ಲಿ ಗೆಲುವು ಸಾಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದರು.