ಇತಿಹಾಸದಲ್ಲೇ ದಾಖಲೆ ಮತ ಪಡೆದು ಗೆದ್ದು ಬೀಗಿದ ಸಿಪಿ ಯೋಗೇಶ್ವರ್

Most read

ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿ.ಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಈ ಹಿಂದೆಯೂ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿ ಬರೋಬ್ಬರಿ ಐದು ಬಾರಿ ಗೆಲುವು ಪಡೆದಿದ್ದ ಸಿ.ಪಿ ಯೋಗೇಶ್ವರ್, 6ನೇ ಬಾರಿಗೆ ಮತ್ತೊಮ್ಮೆ ಗೆಲುವು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಚಿನ್ನೆಯಿಂದ ಮೂರನೇ ಬಾರಿ ಗೆದ್ದು, ಪಕ್ಷಾಂತರ ಮಾಡಿದರೂ ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ.

ಚನ್ನಪಟ್ಟಣದಿಂದ ಐದು ಬಾರಿ ಗೆಲುವು ಪಡೆದುಕೊಂಡಿದ್ದ ಸಿ.ಪಿ ಯೋಗೇಶ್ವರ್ ಅವರು ಒಮ್ಮೆಯೂ ಕೂಡ 85 ಸಾವಿರ ಮತಗಳಿಗಿಂತ ಹೆಚ್ಚು ಮತಗಳನ್ನು ಪಡೆದುಕೊಂಡಿರಲಿಲ್ಲ. ಆದರೆ ಈ ಬಾರಿ ಸಿಪಿ ಯೋಗೇಶ್ವರ್ ಒಂದು ಲಕ್ಷಕ್ಕೂ ಅಧಿಕ ಮತಗಳನ್ನ ಪಡೆದು ದಾಖಲೆ ನಿರ್ಮಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ 112642 ಮತಪಡೆದು 25,413 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 87229 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

ಈ ಹಿಂದೆ ಮಂಡ್ಯದಿಂದ ಲೋಕಸಭೆ ಚುನಾವಣೆ, ರಾಮನಗರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಂಡಿದ್ದ ಅವರು, ಇದೀಗ ಮೂರನೇ ಪ್ರಯತ್ನದಲ್ಲಿಯೂ ವಿಫಲರಾಗಿದ್ದಾರೆ. ನಿಖಿಲ್, ಯೋಗೇಶ್ವರ್ ಅಭ್ಯರ್ಥಿಯಾದರೂ, ಇದು ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಯುದ್ಧವೇ ಆಗಿತ್ತು.

More articles

Latest article