ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ವಿಪಕ್ಷಗಳ ಆರೋಪಗಳನ್ನು ಜನರೇ ತಿರಸ್ಕರಿಸಿ ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಉಪ ಚುನಾವಣೆ ಫಲಿತಾಂಶ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಚುನಾವಣೆ ಗೆಲುವಿನ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ ಹೇಳಿದ್ದೆ ಅದರಂತೆ ಇಂದು ಫಲಿತಾಂಶ ಬಂದೆ. ಜನರು ಗ್ಯಾರಂಟಿ ಯೋಜನೆಗೆ ಮತ ಎಂದು ಹೇಳದ್ದಾರೆ.
ಗ್ಯಾರಂಟಿ ಕುರಿತು ಅಪಪ್ರಚಾರ, ಗ್ಯಾರಂಟಿ, ಅಭಿವೃದ್ಧಿಗೆ ಹಣ ಇಲ್ಲ ಎನ್ನುತ್ತಿದ್ದರು. ಆದರೆ, ಈಗ ಒಂದೇ ಕ್ಷೇತ್ರಕ್ಕೆ ಕೋಟಿ ಕೋಟಿ ಹಣ ಹೋಗುತ್ತಿದೆ. ತಾಯಂದಿರು ಉಚಿತ ಪ್ರವಾಸ ಮಾಡುತ್ತಿದ್ದಾರೆ, ಹಣ ಬರುತ್ತಿದೆ. ಸುಳ್ಳು ಆರೋಪ ಮಾಡಿದ್ದಾರೆ, ಸುಳ್ಳೇ ಮನೆ ದೇವರು ಎಂದು ಪ್ರಚಾರ ಮಾಡಿದ್ದಾರೆ. ಅದಕ್ಕೆ ಮತದಾರರೇ ಉತ್ತರ ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಹೆಚ್ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದ ಸಂಸದರಾಗಿದ್ದಾರೆ. ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಟ್ಟು ಹೋದ ಕುರುಹುಗಳಿಗೆ ಈಗ ಜನ ಉತ್ತರ ನೀಡಿದ್ದಾರೆ. ಅನೇಕ ಬಾರಿ ಬಿಜೆಪಿ ಜೆಡಿಎಸ್ ನಾಯಕರು ಟೀಕೆ ಮಾಡಿದ್ದಾರೆ. ನಾನು ಮೊದಲೇ ಹೇಳಿದ್ದೆ, ಟೀಕೆ ಸಾಯುತ್ತವೆ, ಕೆಲಸ ಉಳಿಯಿತ್ತವೆ ಅಂತ. ಈಗ ಜನರ ಮನ್ನಣೆ ಕೊಟ್ಟಿದ್ದಾರೆ. ಜನರು ಭಾವನೆ ಮೇಲೆ ರಾಜಕಾರಣ ಮಾಡಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು. ಅದೇ ಜನ ಆಶೀರ್ವಾದ ನೀಡಿದ್ದಾರೆ ಎಂದಿದ್ದಾರೆ.
ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲೂ ನಾವು ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.