ಇಬ್ಬರು ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Most read

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್​ ನೀಡಿದ್ದಾರೆ. ದೇವಯ್ಯ ಪಾರ್ಕ್ ಸಮೀಪವಿರುವ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವೈಯ್ಯಾಲಿಕಾವಲ್​ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಆಸ್ತಿಪಾಸ್ತಿಗಳ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬಿಬಿಎಂಪಿ ಪಶ್ಚಿಮ ವಲಯದ ಕಲ್ಯಾಣ ವಿಭಾಗದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಫಲಾನುಭವಿಗಳ ಹಣವನ್ನು ಅಕ್ರಮವಾಗಿ ಸೊಸೈಟಿಗಳಿಗೆ ವರ್ಗಾಯಿಸಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ  ಶ್ರೀನಾಥ್ ಜೋಷಿ ಮಾರ್ಗದರ್ಶನದಲ್ಲಿ ಡಿವೈಎಸ್​​ಪಿ ಸುನೀಲ್ ವೈ ನಾಯಕ್ ನೇತೃತ್ವದಲ್ಲಿ ಎಂಟು ತಂಡಗಳು ಬೆಳಗ್ಗೆ 6.30ರ ಸುಮಾರಿಗೆ ಏಕಕಾಲಕ್ಕೆ‌ ದಾಳಿ ಮಾಡಿವೆ.

More articles

Latest article