ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪನೆ ಕುರಿತ ಅರ್ಜಿ ವಜಾ

Most read

ನವದೆಹಲಿ: ಹಿಂದೂ ಧರ್ಮದ ರಕ್ಷಣೆಗಾಗಿ ವಕ್ಫ್ ಬೋರ್ಡ್ ರೀತಿ ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಈ ಪ್ರಕರಣ ನೀತಿ ನಿರೂಪಣೆ ವ್ಯಾಪ್ತಿಗೆ ಒಳಪಡುವುದರಿಂದ ನ್ಯಾಯಾಲಯ ಮಧ್ಯಪ್ರವೇಶಿಸಲು ಅಸಾಧ್ಯ ಎಂದು ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರಿದ್ದ ದ್ವಿಸದಸ್ಯ ಪೀಠ ತಿಳಿಸಿದೆ.

ಈ ವಿಚಾರ ಕುರಿತು ನ್ಯಾಯಾಲಯ ಏನೂ ಮಾಡಲು ಸಾಧ್ಯವಿಲ್ಲ ಎಂದ ನ್ಯಾಯಮೂರ್ತಿ ಮನಮೋಹನ್‌ ಅವರು ಸೂಕ್ತ ಕ್ರಮಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿದ್ದಾರೆ.

ಸನಾತನ ಧರ್ಮದ ಅನುಯಾಯಿಗಳ ಮೇಲೆ ಇತರ ಧರ್ಮದ ಅನುಯಾಯಿಗಳು ಹಲ್ಲೆ ನಡೆಸುತ್ತಿದ್ದಾರೆ. ಸನಾತನ ಧರ್ಮದ ಹಕ್ಕುಗಳು ಮತ್ತು ಆಚಾರಗಳ ರಕ್ಷಣೆಗೆ ಯಾವುದೇ ಧಾರ್ಮಿಕ ಸಂಸ್ಥೆ ಇಲ್ಲ. ಆದ್ದರಿಂದ ಅಂತಹ ಸಂಸ್ಥೆ ರಚಿಸುವಂತೆ ಸನಾತನ ಹಿಂದೂ ಸೇವಾ ಸಂಘ ಟ್ರಸ್ಟ್‌ ಅರ್ಜಿ ಸಲ್ಲಿಸಿತ್ತು. ಸರ್ಕಾರಕ್ಕೆ ಈ ಸಂಬಂಧ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ದೊರೆಯದ ಕಾರಣ ನ್ಯಾಯಾಲಯದ ಮೊರೆ ಹೋಗಿರುವುದಾಗಿ ಸಂಘ ತಿಳಿಸಿದೆ.

More articles

Latest article