ಸಚಿವ  ಪ್ರಹ್ಲಾದ ಜೋಷಿ   ಭೇಟಿಯಾದ ಡಿಸಿಎಂ ಶಿವಕುಮಾರ್

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಷಿ  ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾಗಿ ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ, ಕೃಷ್ಣಾ ಜಲ ವಿವಾದಕ್ಕೆ ಸಂಬಂಧಿಸಿದಂತೆ ಗೆಜೆಟ್‌ ಅಧಿಸೂಚನೆ, ಕೃಷ್ಣಾ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವ ಮತ್ತು ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಅರಣ್ಯ ಮತ್ತು ವನ್ಯಜೀವಿ ಅನುಮೋದನೆ ನೀಡುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ. ರಾಜ್ಯದ ಕುಡಿಯುವ ನೀರು ಹಾಗೂ ಕೃಷಿಗೆ ಚೈತನ್ಯ ನೀಡಲಿರುವ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಅವರಿಗೆ ಮನವಿ ಸಲ್ಲಿಸಿದ್ದಾರೆ.

More articles

Latest article

Most read