ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಶಾಲೆಯ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿ ಸಾವು

Most read

 

ಕಾರವಾರ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ತುಂಡಾದ ವಿದ್ಯುತ್ ವೈರ್ ತಗುಲಿ 2ನೇ ತರಗತಿ ವಿದ್ಯಾರ್ಥಿನಿ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 8 ವರ್ಷದ 2ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಬಸವರಾಜ ಗೌಳಿ ಮೃತ ವಿದ್ಯಾರ್ಥಿನಿ. ಬೋರ್‌ವೆಲ್ ಗೆ ಅಳವಡಿಸಲು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯಲಾಗಿದ್ದು, ತಂತಿ ತುಂಡಾಗಿ ಶಾಲೆಯ ಶೌಚಾಲಯದ ಒಳಗೆ ಬಿದ್ದಿತ್ತು. ಅದೇ ಸಮಯದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ಸಾನ್ವಿ ತುಂಡಾಗಿ ಬಿದ್ದಿದ್ದ ತಂತಿ ತುಳಿದು ಅಸು ನೀಗಿದ್ದಾಳೆ.

ಹೆಸ್ಕಾಂ ಹಾಗೂ ಮುಖ್ಯ ಶಿಕ್ಷಕರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಹಶೀಲ್ದಾರ್ ಪ್ರವೀಣ್ ಹುಚ್ಚನ್ನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದ್ಯ ವಿಷಯ ತಿಳಿದ ಶಾಸಕ ​ಆರ್.ವಿ.ದೇಶಪಾಂಡೆ ಆಸ್ಪತ್ರಗೆ ಭೇಟಿ ನೀಡಿ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

More articles

Latest article