ನರ್ಸ್‌ ಮೇಲೆ ಗ್ಯಾಂಗ್‌ ರೇಪ್;‌ ಗುಪ್ತಾಂಗಕ್ಕೆ ಮೆಣಸಿನ ಪುಡಿ ಎರಚಿ ಕ್ರೌರ್ಯ

Most read

ಲಖನೌ: ಉತ್ತರ ಪ್ರದೇಶದ ಜಲೌನ್‌ನಲ್ಲಿ ನರ್ಸ್‌ವೊಬ್ಬರು ತನ್ನ ಮೇಲೆ ಇಬ್ಬರು ವ್ಯಕ್ತಿಗಳ ಸಾಮೂಹಿಕ ಅತ್ಯಾಚಾರವೆಸಗಿದ್ದು, ಗುಪ್ತಾಂಗಕ್ಕೆ ಕೋಲು ಮತ್ತು ಮೆಣಸಿನ ಪುಡಿಯನ್ನು ಎರಚಿ ಕ್ರೌರ್ಯ ಮೆರೆದಿದ್ದಾರೆ ಎಂದು ಆಪಾದಿಸಿದ್ದಾರೆ.  ಅಲ್ಲದೆ ಇತರ ನಾಲ್ವರು ನನ್ನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎಂದೂ  ಸಂತ್ರಸ್ತೆ ದೂರಿದ್ದಾರೆ.  ಅತ್ಯಾಚಾರಕ್ಕೊಳಗಾದ ಮಹಿಳೆಯ ಕುಟುಂಬದ ಸದಸ್ಯರು  ಪ್ರಕರಣ ಕುರಿತು  ಪೊಲೀಸರಿಗೆ ದೂರು ನೀಡಿದ್ದಾರೆ. ಚುರ್ಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನನ್ನ ಪತ್ನಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಸಂತ್ರಸ್ತೆಯ ಪತಿ ತಿಳಿಸಿದ್ದಾರೆ.

ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಆಕೆಯನ್ನು ಅಡ್ಡಗಟ್ಟಿ, ಪೊದೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆಯ ಪತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಮಧ್ಯಮಗಳು ವರದಿ ಮಾಡಿವೆ. ಸಂತ್ರಸ್ತ ಮಹಿಳೆಯು ಅದೇ ಗ್ರಾಮದ ಮತ್ತೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ವಿವಾದದ ಸಂದರ್ಭದಲ್ಲಿ ವ್ಯಕ್ತಿ ಮತ್ತು ಆತನ ಕುಟುಂಬದವರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಂತದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಬಗ್ಗೆಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಲೌನ್‌ ಪೊಲೀಸ್‌ ವರಿಷ್ಠಾಧಿಖಾರಿ ಪ್ರೀಪ್‌ ಕುಮಾರ್‌ ವ್ರಮಾ ತಿಳಿಸಿದ್ದಾರೆ.

 ನ.22ರಂದು ಮಧ್ಯಪ್ರದೇಶದ ಮೌಗಂಜ್‌ ಜಿಲ್ಲೆಯಲ್ಲಿ ಚಲಿಸುವ ಆಂಬುಲೆನ್ಸ್‌ ನಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಚಾಲಕ ಸೇರಿ ಐವರನ್ನು ಬಂಧಿಸಲಾಗಿತ್ತು.

More articles

Latest article