ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕಲಿಗ ಮಠದ ಸ್ವಾಮೀಜಿ ವಿರುದ್ಧ FIR: ಠಾಣೆಗೆ ಹಾಜರಾಗುವಂತೆ ನೋಟಿಸ್

Most read

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿಗೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಸ್ವಾಮೀಜಿ ಹೇಳಿಕೆಯ ವಿರುದ್ಧ ಸೈಯದ್ ಅಬ್ಬಾಸ್ ಎಂಬುವರು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಧರ್ಮ ಧರ್ಮಗಳ‌ ಮಧ್ಯೆ ವೈರತ್ವ ಉಂಟು ಮಾಡುವ ಪ್ರಚೋದನೆ ಮಾಡಿದ ಆರೋಪ ಮಾಡಿ, ದೂರು ನೀಡಿದ್ದರು.

ಈ ದೂರಿನ ಬೆನ್ನಲ್ಲೇ ಡಿಸೆಂಬರ್ 2 ರಂದು ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ ನೊಟೀಸ್‌ನಲ್ಲಿ ಸ್ವಾಮೀಜಿಗೆ ಸೂಚನೆ ನೀಡಲಾಗಿದೆ.

ಇದೇ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಕ್ಫ್ ವಿರುದ್ಧದ ಹೋರಾಟದ ವೇಳೆ ಚಂದ್ರಶೇಖರ್ ಸ್ವಾಮೀಜಿ, ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನೀಡದೇ ಇರುವ ಕಾನೂನು ತರಬೇಕು ಎಂದಿದ್ದರು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು. ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

More articles

Latest article