ಫೆಂಗಲ್ ಚಂಡಮಾರುತ ಎಫೆಕ್ಟ್ ; 14 ಜಿಲ್ಲೆಗಳಲ್ಲಿ ಮಳೆ; ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದೆ. ಕರ್ನಾಟಕದಲ್ಲೂ ಮುಂದಿನ 5 ದಿನಗಳ ಮಳೆಯಾಗಲಿದೆ ಎಂದು
ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,ಮಂಡ್ಯ, ಚಾಮರಾಜನಗರ
ಸೇರಿದಂತೆ 14 ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೊಡಗು, ಮೈಸೂರು
ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಆರೇಂಜ್
ಅಲರ್ಟ್ ಘೋಷಿಸಲಾಗಿದ್ದು, ಇಂದು ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ
ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,
ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ
ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ
ನೀಡಿದೆ.
ಎಲ್ಲೆಲ್ಲಿ ರಜೆ; ಎಲ್ಲೆಲ್ಲಿ ರಜೆ ಇಲ್ಲ?
ಮೈಸೂರಿನಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಇಂದು ಸೋಮವಾರ ಜಿಲ್ಲೆಯ ಎಲ್ಲ
ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ
ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲೂ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆಯು ಸರ್ಕಾರಿ ಖಾಸಗಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲೂ ಜಿಲ್ಲಾಡಳಿತ ಪದವಿಪೂರ್ವವರೆಗೆ
ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಆದರೆ ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.