ಕರ್ತವ್ಯ ಆರಂಭಿಸಬೇಕಿದ್ದ ನವ ಐಪಿಎಸ್ ಅಧಿಕಾರಿ ಅಪಘಾತಕ್ಕೆ ಬಲಿ; ತರಬೇತಿ ಮುಗಿಸಿ ಡ್ಯೂಟಿಗೆ ಹಾಜರಾಗಲು ಹಾಸನಕ್ಕೆ ಆಗಮಿಸುತ್ತಿದ್ದ ಹರ್ಷವರ್ದನ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಮನೆಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಹಾಸನ ಸಮೀಪ ನಡೆದಿದೆ. ಮಧ್ಯಪ್ರದೇಶ ರಾಜ್ಯದ ಸಿಂಗ್ರುಲಿ ಜಿಲ್ಲೆಯ ದೊಸಾರ್ ಗ್ರಾಮದ ಹರ್ಷವರ್ದನ್ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಅಸುನೀಗಿದ್ದಾರೆ. ಇವರು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯಿಂದ ಹಾಸನ ಜಿಲ್ಲಾ ಎಸ್ ಪಿ ಕಚೇರಿಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿದೆ. ಅಪಘಾತದಲ್ಲಿ ಡಿ ಎ ಆರ್ ಕಾನ್ ಸ್ಟೇಬಲ್ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ. ಕೂಡಲೇ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 ಕೂಡಲೇ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಐ ಸಿಯು ನಲ್ಲಿ ಚಿಕಿತ್ಸೆ ನೀಡಲಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ದುರದೃಷ್ಟವಶಾತ್ ಹರ್ಷವರ್ಧನ್ ಮೃತಪಟ್ಟಿದ್ದಾರೆ

ಇವರ ತಂದೆ ಅಖಿಲೇಶ್ ಎಸ್ ಡಿ ಎಂ( ಎಸಿ ಕೇಡರ್ ಅದಿಕಾರಿ) ಮದ್ಯಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾರೆ. ಹರ್ಷವರ್ಧನ್ ಐಐಟಿ ಯಲ್ಲಿ ಬಿಇ ಪದವಿ ಪಡೆದಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರ್ಷವರ್ಧನ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.

More articles

Latest article

Most read