ಹಳಿಯಾಳ: ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ. ನವೀನ್ ನಾರಾಯಣ್ ಬೆಳಗಾಂವಕರ ಮೃತಪಟ್ಟ ಬಾಲಕ. ಈತ ಬಲೂನ್ ಊದುವ ಸಂದರ್ಭದಲ್ಲಿ ಬಲೂನ್ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿತ್ತು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾದರೂ ಪ್ರಯೋಜನವಾಗಿಲ್ಲ. ಆ ವೇಳೆಗಾಗಲೇ ಬಾಲಕ ಮೃತಪಟ್ಟಿದ್ದ ಎಂದು ಬಾಲಕನ ಕುಟುಂಬದ ಸದಸ್ಯರೊಬ್ಬರು ತಿಳಿಸಿದ್ದಾರೆ. ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.