Thursday, December 12, 2024

ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ: ಸಿಎಂ ಸಿದ್ದರಾಮಯ್ಯ

Most read

ಬೆಳಗಾವಿ: ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷ 4 ಸಾವಿರ ಕೋಟಿ ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ. ಶೇ.25 ರ ಒಳಗಡೆಯೇ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಅವರು ಜೆಡಿಎಸ್ ನ ತಿಪ್ಪೇಸ್ವಾಪಿ ಅವರ ಪ್ರಶ್ನೆಗೆ ಉತ್ತರಿಸಿದರು.

ಯಾವುದೇ ಸರ್ಕಾರ ತನ್ನ ಖರ್ಚುಗಳನ್ನು ಮಾಡಬೇಕಾದರೆ ಸಾಲವನ್ನು ಮಾಡಬೇಕಾಗುತ್ತದೆ. ನಮ್ಮ ಇತಿಮಿತಿಗಳನ್ನು ಪರಿಶೀಲಿಸಿ ಸಾಲ ಮಾಡಲಾಗುತ್ತದೆ. ಒಟ್ಟು ಸಾಲ ಶೇ.25 ವರೆಗೂ ಮೀರಬಾರದು ಎಂಬ ಮಾನದಂಡಗಳಿದ್ದು, ನಮ್ಮ ಸರ್ಕಾರದ ಸಾಲ ಮಿತಿಯ ಒಳಗಡೆ ಇದೆ. ರಾಜ್ಯ ಸರ್ಕಾರ 1ಲಕ್ಷದ 4 ಸಾವಿರ ಕೋಟಿ ರೂಗಳ ಸಾಲವನ್ನು ಮಾಡಲಾಗಿದ್ದು,ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದ ಸಾಲ ಕಡಿಮೆ ಇದೆ. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52000 ಕೋಟಿ ರೂ.ಗಳನ್ನು ನೀಡಲಾಗಿದೆ. ಉಳಿದ ಹಣವನ್ನು ಅಭಿವೃದ್ಧಿಗೆ ನೀಡಲಾಗುತ್ತಿದೆ. ವಿರೋಧ ಪಕ್ಷದವರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು.

ಎಸ್ ಸಿ ಪಿ/ಟಿಎಸ್ ಪಿಗಳಿಗೆ ಬಳಸಲಾಗಿರುವ ಹಣ 2017-18ನೇ ಸಾಲಿನಲ್ಲಿ 36 ಸಾವಿರ ಕೋಟಿ ರೂ.ಖರ್ಚು ಮಾಡಲಾಗಿದೆ. ಈ ವರ್ಷ 39, 272 ಕೋಟಿ ರೂ.ಗಳ ಅನುದಾನ ಇಡಲಾಗಿದೆ. ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಮಾತ್ರ ಎಸ್ ಸಿ ಪಿ/ಟಿ ಎಸ್ ಪಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದರು.

ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಈ ಕಾಯ್ದೆ ಏಕೆ ಜಾರಿ ಮಾಡಿಲ್ಲ ಎಂದು ಪ್ರಶ್ನಿಸಿದ ಸಿಎಂ, ಕೇಂದ್ರ ಸರ್ಕಾರ ಏಕೆ ಈ ಕಾಯ್ದೆ ಮಾಡಿಲ್ಲ ಎಂದು ಮರು ಪ್ರಶ್ನಿಸಿದರು.

More articles

Latest article