ಜೋಗ ಜಲಪಾತಕ್ಕೆ 45 ದಿನ ಪ್ರವೇಶ ಬಂದ್! ಇಲ್ಲಿದೆ ಕಾರಣ

Most read

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇದರಲ್ಲಿ ಜೋಗ ಜಲಪಾತದ ಪ್ರವೇಶ ದ್ವಾರವೂ ಒಂದಾಗಿರುತ್ತದೆ. ಈ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಉದ್ದೇಶದಿಂದ 2025 ಜನವರಿ 1ರಿಂದ ಮಾರ್ಚ್ 15 ರವರೆಗೆ ಜೋಗ ಜಲಪಾತವನ್ನು ಮುಚ್ಚಲಾಗಿರುತ್ತದೆ. ಈ ಅವಧಿಯಲ್ಲಿ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಭಂಧಿಸಲಾಗಿರುತ್ತದೆ. ಆದ್ದರಿಂದ ಪ್ರವಾಸಿಗರು ಸಹಕರಿಸಬೇಕು ಎಂದು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.

More articles

Latest article