ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೆ.ಆರ್.ಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿ ರೂ. 24 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಮಹಿಳೆಯಿಂದ 12 ಕೆ.ಜಿ ಎಂಡಿಎಂಎ ಕ್ರಿಸ್ಟಲ್, ಒಂದು ಮೊಬೈಲ್, 70 ಏರ್‌ಟೇಲ್ ಸಿಮ್ ಕಾರ್ಡ್‌ಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ರೂ. 24 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಟಿ.ಸಿ. ಪಾಳ್ಯದಲ್ಲಿ ತಂಗಿದ್ದ ಶಂಕಿತ ಮಹಿಳೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ’ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಈವರೆಗೆ ನಡೆಸಿದ ಅತಿ ದೊಡ್ಡ ಡ್ರಗ್ಸ್ ಕಾರಾಯಚರಣೆ ಇದಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಡ್ರಗ್ಸ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಮತ್ತೊಬ್ಬ ಮಹಿಳೆಗಾಗಿ ಹುಡುಕಾಟ ನಡೆದಿದೆ ಎಂದು ತಿಳಿದು ಬಂದಿದೆ.