ಬೆಂಗಳೂರು: ರಿಪಬ್ಲಿಕ್ ಕನ್ನಡ ಟಿವಿ ಸುದ್ದಿಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದ್ವೇಷ ಹರುಡವ ಸುದ್ದಿ ಪ್ರಸಾರ ಮಾಡಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಚಾನೆಲ್ ನ ಕಾರ್ಯಕಾರಿ ನಿರ್ದೇಶಕ ಅರ್ನಾಬ್ ಗೋಸ್ವಾಮಿ ವಿರುದಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಈ ಆರೋಪಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಇದಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಎಂದು ಅರ್ನಾಬ್ ಗೋಸ್ವಾಮಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ವಿಚಾರಣೆ ಸಂದರ್ಭದಲ್ಲಿ ಗೋಸ್ವಾಮಿ ಪರ ಹಾಜರಿದ್ದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಝೀರೊ ಟ್ರಾಫಿಕ್ ಕಲ್ಪಿಸಿರುವುದರಿಂದ ಆಂಬುಲೆನ್ಸ್ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂಬ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ತಿಳಿಯುತ್ತಿದ್ದಂತೆ ಕೂಡಲೇ ಪ್ರಸಾರವನ್ನು ನಿಲ್ಲಿಸಲಾಗಿದೆ. ಈ ಬೆಳವಣಿಗೆಗಳೆಲ್ಲವೂ ಒಂದೇ ದಿನದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಭಾರತೀಯ ದಂಡ ಸಂಹಿತೆಯ ಕಲಂ 505(2)
ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಪ್ರತಿಯಾಗಿ, ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ವಾದಿಸಿ ಅರ್ನಾಬ್ ಗೋಸ್ವಾಮಿ ಅತಿ ಉತ್ಸಾಹಿ ಇದ್ದಾರೆ ಎಂದರು. ಅರ್ನಾಬ್ ಗೋಸ್ವಾಮಿ ಏನನ್ನು ತೋರಿಸಬೇಕೋ ಅದನ್ನು ತೋರಿಸುತ್ತಾರೆ. ಅವರಿಂದ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಅದರಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದೂ ಎರಡೂ ಇದೆ. ಇಂತಹ ವಿಷಯಗಳಿಗೆ ಬಿಎನ್ಎಸ್ ಕಲಂ 505(2) ಅನ್ವಯಿಸುವುದು ಉತ್ತಮ
ಪ್ರಕ್ರಿಯೆ ಅಲ್ಲ ಎಂದು ಹೇಳಿ ತನಿಖೆಗೆ ತಡೆ ನೀಡಿ ಆದೇಶ ಹೊರಡಿಸಿದರು.