‌ ದೇಶಿಯ ಕುರಿ ತಳಿ ಸಂರಕ್ಷಣೆಗೆ ಯತೀಂದ್ರ ಸಿದ್ದರಾಮಯ್ಯ ಆಗ್ರಹ

Most read

ಬೆಂಗಳೂರು: ದೇಶಿಯ ಕುರಿ ತಳಿ ಸಂರಕ್ಷಣೆ ಮಾಡಲು ರೈತರಿಗೆ ಉಚಿತವಾಗಿ ದೇಶಿ ತಳಿ ಕುರಿಗಳನ್ನು ಸರ್ಕಾರ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಲವಾರು ದೇಶಿಯ ಕುರಿ ತಳಿಗಳು ವಿನಾಶದ ಅಂಚಿನಲ್ಲಿವೆ. ದೇಶಿ ಕುರಿ ತಳಿಗಳ ಸಂರಕ್ಷಣೆಗೆ ಸಾಕಷ್ಟು ಮೂಲಭೂತ ಸೌಕರ್ಯಗಳು ಮತ್ತು ಕುರಿಗಾಹಿಗಳಿಗೆ ಸಹಾಯ ಧನದ ಅವಶ್ಯಕತೆ ಇದೆ. ಇದಕ್ಕಾಗಿ 5 ಕೋಟಿ ರೂ. ವಿಶೇಷ ಅನುದಾನ ಕೊಡಬೇಕು. ಅಲ್ಲದೆ ಉಚಿತವಾಗಿ ರೈತರಿಗೆ ದೇಶಿ ತಳಿ ಕೊಡಬೇಕು ಎಂದು ಒತ್ತಾಯಿಸಿದರು.

ಪಶುಸಂಗೋಪನೆ ಸಚಿವ ವೆಂಕಟೇಶ್ ಉತ್ತರ ನೀಡಿ, 2019ರ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ 110.51 ಲಕ್ಷ ಕುರಿಗಳು ಹಾಗೂ 61.69 ಲಕ್ಷ ಮೇಕೆಗಳು ಇವೆ. ಮಂಡ್ಯ, ಹಾಸನ, ಕೆಂಗುರಿ, ಬಳ್ಳಾರಿಯಲ್ಲಿ ಡೆಕನಿ, ಯಳಗ ಕುರಿ ತಳಿಗಳು ಮತ್ತು ನಂದಿದುರ್ಗ, ಬಿದರಿ ಮೇಕೆ ತಳಿಗಳು ಇವೆ. ರಾಜ್ಯದಲ್ಲಿ ವಿನಾಶದ ಅಂಚಿನಲ್ಲಿ ಇರುವ ದೇಶಿಯ ಕುರಿ ತಳಿ ಸಂರಕ್ಷಣೆಗಾಗಿ 5 ಕಡೆ ಕುರಿ/ಮೇಕೆ ತಳಿ ಸಂವರ್ಧನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈಗಾಗಲೇ ರೈತರಿಗೆ ರಿಯಾಯಿತಿ ದರದಲ್ಲಿ ಮೇಕೆ, ಕುರಿ ತಳಿಗಳನ್ನು ಕೊಡಲಾಗುತ್ತಿದೆ. ವಿಶೇಷ ಅನುದಾನ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

More articles

Latest article