ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು.
ಬಳಿಕ ಆಡಳಿತ ಪಕ್ಷದ ಸದಸ್ಯರು ತಮ್ಮ ಆಸನಗಳ ಎದುರು ಅಂಬೇಡ್ಕರ್ ಅವರ ಭಾವಚಿತ್ರವನ್ನು ಅತ್ಯಂತ ಪ್ರೀತಿ ಮತ್ತು ಗೌರವದಿಂದ ಜೋಡಿಸಿಟ್ಟರು. ಆ ವೇಳೆ ಸದನ ಅಂಬೇಡ್ಕರ್ ಪ್ರಭೆಯಿಂದ ಕಂಗೊಳಿಸಿದ ದೃಶ್ಯ ಹೀಗಿದೆ.