ಸಿ. ಟಿ ರವಿ ಅಸಭ್ಯ ಪದ ಬಳಕೆ: ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ : ಬಿಜೆಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್ ಸಭಾಪತಿಯವರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿ. ಟಿ.ರವಿ ಅವರು ಆರೋಪವನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮತ್ತೊಬ್ಬ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯಿಸಿ ಇದು ವಿಧಾನ ಪರಿಷತ್ ಗೆ ಕಳಂಕ. ಬಿಜೆಪಿ ಮನಸ್ಥಿತಿ ಏನು ಎಂದು ಇದರಿಂದ ಅರ್ಥವಾಗುತ್ತದೆ. ಸಿ.ಟಿ.ರವಿ ಅವರ ಉಚ್ಚಾಟನೆಯನ್ನು ಸಭಾಪತಿ ತೀರ್ಮಾನಿಸ್ತಾರೆ ಎಂದರು.
ಸಿ.ಟಿ. ರವಿಗೆ ಹೆಂಡತಿ ಮಕ್ಕಳು ಇಲ್ವಾ..? ಸಿ.ಟಿ ರವಿ ಬೇಷರತ್ ಆಗಿ ಕ್ಷಮೆ ಕೇಳಬೇಕು. ಸಿ.ಟಿ. ರವಿ ವಿರುದ್ದ ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್ ಕಿಡಿ ಕಾರಿದ್ದಾರೆ. ಈ ಮಧ್ಯೆ ಸದನದ ಆಡಿಯೋ, ವಿಡಿಯೋ ಪರಿಶೀಲನೆಗೆ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದ್ದಾರೆ. ಪರಿಷತ್ ಕಾರ್ಯದರ್ಶಿಗಳು ಸದನದ ಆಡಿಯೋ, ವಿಡಿಯೋ ಪರಿಶೀಲನೆ ಮಾಡುತ್ತಿದ್ದಾರೆ.

More articles

Latest article

Most read