ಸಕ್ಕರೆ ಕಾರ್ಖಾನೆಗಳ ಉಪ ಉತ್ಪನ್ನಗಳ ಉತ್ಪಾದನೆ: ಲಾಭದಲ್ಲಿ ರೈತರಿಗೂ ಪಾಲು; ಪರಿಶೀಲನೆಗೆ ಸಿಎಂ ಸೂಚನೆ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗಳು ಲಾಭಾಂಶದಲ್ಲಿ ರೈತರಿಗೂ ಪಾಲು ನೀಡಬೇಕು. ಈ ಸಂಬಂಧ ಪರಿಶೀಲನೆ ನಡೆಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಸಭೆಯ ಮುಖ್ಯಾಂಶಗಳು ಹೀಗಿವೆ:

•ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 10 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

•ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್ ಮ್ಯಾನುಫಾಕ್ಚರಿಂಗ್ ಕ್ಲಸ್ಟರ್ ನಲ್ಲಿ ಸೆಮಿಕಂಡಕ್ಟರ್ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

•ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಲು ಸೂಚನೆ ನೀಡಿದರು.

•ಕೆಐಎಡಿಬಿಯಿಂದ ಕೈಗಾರಿಕೆಗಳನ್ನು ಆರಂಭಿಸಲು ಜಮೀನು ಪಡೆಯುವ ಕಂಪೆನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆಯನ್ನು ಆರಂಭಿಸದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಬೇಕು.

•ಸರ್ಕಾರದ ನಿಯಮಾವಳಿಗೆ ಅನುಸಾರವಾಗಿ ಕೈಗಾರಿಕೆಗಳು ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.

More articles

Latest article