ಮಂಚಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

Most read

ಕೋಲಾರ: ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ವಸತಿ ನಿಲಯದಲ್ಲಿ ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಿಂದುಶ್ರೀ (17) ಮೃತ ವಿದ್ಯಾರ್ಥಿನಿ. ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿರುವ ಬೈರವೇಶ್ವರ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಈ ಘಟನೆ ನಡೆದಿದೆ.
ವಸತಿ ನಿಲಯದಲ್ಲೇ ಬಿಂದುಶ್ರೀ ಹಾಸ್ಟೆಲ್ನ ಮಂಚದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈಕೆ ಜಿಲ್ಲೆಯ ಗಂಗರೇಕಾಲುವೆ ಗ್ರಾಮದ ನಿವಾಸಿ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

More articles

Latest article