ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ಹಾಗೂ ಅತಿ ವೇಗದ ಚಾಲನೆ ಮಾಡಿದವರ ವಿರುದ್ಧ ಕಳೆದ ಒಂದು ವಾರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 60,903 ವಾಹನ ಚಾಲಕರನ್ನು ತಪಾಸನೆಗೊಳಪಡಿಸಿ 769 ಪ್ರಕರಣಗಳನ್ನು ದಾಖಲಿಸಲಾಗಿದೆ. ಆರೋಪಿ ಚಾಲಕರ ವಾಹನ ಪರವಾನಗಿ (ಡಿಎಲ್) ಅನ್ನು ರದ್ದುಪಡಿಸುವಂತೆ ಸಾರಿಗೆ ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಅದೇ ರೀತಿ ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದ 241 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 2.41 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಹೊಸ ವರ್ಷಾಚರಣೆ ಸಮೀಪಿಸುತ್ತಿದೆ. ಮದ್ಯ ಸೇವಿಸಿ ವಾಹನ ಚಲಾಯಿಸುವವರು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸುವವರ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸ ವರ್ಷವನ್ನು ಸ್ವಾಗತಿಸುವ ಖುಷಿಯಲ್ಲಿರುವವರು ಎಚ್ಚರಿಕೆಯಿಂದ ವಾಹನಗಳನ್ನು ಚಲಾಯಿಸುವುದು ಒಳಿತು.