ಬಿಜೆಪಿ ಎಷ್ಟೇ ಅರಚಾಡಿದರೂ ರಾಜೀನಾಮೆ ಕೊಡುವುದಿಲ್ಲ; ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಯಾರು ಎಷ್ಟೇ ಚೀರಾಡಿರೂ, ಬಟ್ಟೆ ಹರಿದುಕೊಂಡರೂ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಈ ಮಧ್ಯೆ ಅವರು ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ತನಿಖೆ ನಡೆಸಲು ಸಿಐಡಿಗೆ ವಹಿಸುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರಿಗೆ ಪತ್ರ ಬರೆದಿದ್ದಾರೆ.

ಬೀದರ್​ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪಟ್ಟು ಹಿಡಿದಿದೆ.  

ನನ್ನ ರಾಜೀನಾಮೆ ಕೇಳಲು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸುಪ್ರೀಂಕೋರ್ಟ್‌ ಅಲ್ಲ.  ರಾಜು ಕಪನೂರ್ ನನ್ನ ಆಪ್ತ ಅಲ್ಲ ಎಂದು ನಾನು ಹೇಳಿಯೇ ಇಲ್ಲ. ರಾಜು ಕಪನೂರು ಕಾಂಗ್ರೆಸ್ ಸೇರುವ​ ಮೊದಲು ಬಿಜೆಪಿಯಲ್ಲಿದ್ದರು ಮತ್ತು  ಬಿಜೆಪಿ ಎಸ್​ಸಿ ಮೋರ್ಚಾ ಅಧ್ಯಕ್ಷರಾಗಿದ್ದರು ಎಂದರು. ಈ ಪ್ರಕರಣದಲ್ಲಿ ಸಂಶಯ ಮೂಡಿಸುವಂಥ ಹಲವು ಬೆಳವಣಿಗೆಗಳು  ನಡೆಯುತ್ತಿವೆ.  ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಆದ್ದರಿಂದ ಸತ್ಯಾಂಶ ತಿಳಿಯಲು ಸ್ವತಂತ್ರ ತನಿಖಾ ಸಂಸ್ಥೆ  ಸಿಐಡಿಗೆ ವಹಿಸಬೇಕೆಂದು ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಶಾಸಕ ವಿಜಯೇಂದ್ರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ. ಅವರು ಏಕೆ ರಾಜೀನಾಮೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು. ಕಲಬುರಗಿ ಮುತ್ತಿಗೆಗೆ ಎಷ್ಟು ಜನ ಬರ್ತೀರಿ ಅಂತಾ ಮೊದಲೇ ಹೇಳಿ, ಅಷ್ಟು ಜನರಿಗೆ ಟೀ ವ್ಯವಸ್ಥೆ ಮಾಡುತ್ತೇವೆ. ಇಲ್ಲದಿದ್ದರೆ ನೀರನ್ನೂ ಕೊಟ್ಟಿಲ್ಲ ಎಂದು ಪ್ರತಿಭಟನೆ ಮಾಡ್ತೀರಾ ಎಂದು ಪ್ರಿಯಾಂಕ್‌ ವ್ಯಂಗ್ಯವಾಡಿದರು. ಬಿಜೆಪಿಯಲ್ಲೇ ಬಿ.ವೈ.ವಿಜಯೇಂದ್ರ ಅವರ ಮಾತಿಗೆ ಕಿಮ್ಮತ್ತಿಲ್ಲ.  ಉಳಿದವರು ಯಾಕೆ ಅವರ ಮಾತಿಗೆ ಕಿಮ್ಮತ್ತು ಕೊಡಬೇಕು ಎಂದು ಪ್ರಶ್ನೆ ಮಾಡಿದರು.

More articles

Latest article

Most read