ಲಾಸ್ ಏಂಜಲೀಸ್: ಕ್ಯಾಲಿಪೋರ್ನಿಯಾದ ಲಾಸ್ ಏಜಂಲೀಸ್‌ನ ಅರಣ್ಯದಲ್ಲಿ ಭೀಕರ ಕಾಡ್ಗಿಚ್ಚು ಹಬ್ಬಿದ್ದು, ಸಾವಿರಾರು ಮನೆಗಳು ಮತ್ತು ಅಪಾರ ಸಂಖ್ಯೆಯ ವಾಹನಗಳು ಸುಟ್ಟು ಭಸ್ಮವಾಗಿವೆ. ಈ ಸ್ಥಳದಿಂದ ಸುಮಾರು 30 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂಟಾ ಮೋನಿಕಾ ಬಳಿಯ ಪೆಸಿಫಿಕ್ ಪಾಲಿಸೇಡ್ಸ್ ಪ್ರದೇಶ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಮಂಗಳವಾರ ರಾತ್ರಿಯಿಂದ ತೀವ್ರವಾಗಿ ಗಾಳಿ ಬೀಸುತ್ತಿರುವ ಕಾರಣ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುಮಾರು 10 ಸಾವಿರ ಮನೆಗಳು ಬೆಂಕಿಯಿಂದ ಸುಟ್ಟು ಕರಕಲಾಗಿವೆ. ಅಲ್ಲಿ ವಾಸಿಸುತ್ತಿದ್ದ ಸುಮಾರು 30 ಸಾವಿರನ್ನು ರಕ್ಷಿಸಲಾಗಿದೆ. ಯಾರಿಗೂ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿಯು ಮನೆ, ವಾಹನಗಳಿಗೆ ಹೊತ್ತಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸಮಾರು 200 ಎಕರೆಯಷ್ಟು ಜಾಗವನ್ನು ಕಾಡ್ಗಿಚ್ಚು ಆವರಿಸಿದೆ ಎಂದು ಅಗ್ನಿಶಾಮಕದಳದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಗೆವಿನ್ ನ್ಯೂಸೊಮ್ ಅವರು ಲಾಸ್ ಏಜಂಲೀಸ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.