ಸಿಎಂ ಸಮ್ಮುಖದಲ್ಲಿ ನಕ್ಸಲರ ಶರಣಾಗತಿ

Most read

ಇಂದು ಮುಖ್ಯವಾಹಿನಿಗೆ ಬರುತ್ತಿರುವ ಆರು ನಕ್ಸಲರನ್ನು ಧಿಡೀರ್ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.
ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ನಕ್ಸಲರು ಕುಟುಂಬದವರು ಹಾಗೂ ಮಾಧ್ಯಮದವರು ಕಾಯುತ್ತಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗತಾನೇ ಸೂಚನೆ ಕೊಟ್ಟಿದ್ದಾರೆ. ನನ್ನ ಸಮ್ಮುಖದಲ್ಲೇ ಶರಣಾಗತಿ ಆಗಲಿ ಎಂದು. ಆದ್ದರಿಂದ ಆರು ಜನ ನಕ್ಸಲ್ ಕಾರ್ಯಕರ್ತರನ್ನು ಪೊಲೀಸರ ಜೊತೆ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಶಾಂತಿಗಾಗಿ ನಾಗರಿಕ ವೇದಿಕೆಯ ಕೆ.ಎಲ್.ಅಶೋಕ್ ಹೇಳಿದರು.

ಇವರ ಜೊತೆಗೆ ನಕ್ಸಲ್ ಕಾರ್ಯಕರ್ತರ ಕುಟುಂಬದ ಸದಸ್ಯರನ್ನು ಪೊಲೀಸರ ಜೊತೆಯಲ್ಲಿಯೇ ಕರೆದುಕೊಂಡು ಹೋಗಲಾಗುತ್ತಿದೆ. ಇಂದು ಸಂಜೆ 6 ಗಂಟೆಗೆ ಮುಂಡಗಾರು ಲತಾ ಸೇರಿದಂತೆ ಉಳಿದ 5 ನಕ್ಸಲರು ಬಂದೂಕುಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬರಲಿದ್ದಾರೆ.

More articles

Latest article