ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ನಡುವೆ ಯಾವ ಒಪ್ಪಂದವೂ ಇಲ್ಲ: ಆರ್.ವಿ.ದೇಶಪಾಂಡೆ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ನಡುವೆ ಯಾವ ಒಪ್ಪಂದವೂ ಇಲ್ಲ. ನಮ್ಮಲ್ಲಿ ಹೈಕಮಾಂಡ್ ಇದೆ, ಇಬ್ಬರೂ ವಿಶ್ವಾಸದಲ್ಲೇ ಇದ್ದಾರೆ ಎಂದು ಹಿರಿಯ ಮುಖಂಡ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಸ್ಥ, ಡಿ.ಕೆ. ಶಿವಕುಮಾರ್ ಪಕ್ಷದ ಮುಖ್ಯಸ್ಥ.‌ ಎಲ್ಲರೂ ಕೂಡಿಯೇ ಹೋಗುತ್ತಿದ್ದೇವೆ. ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯವೂ ಇಲ್ಲ ಎಂದರು. ನಾನು ಪಕ್ಷದಲ್ಲಿ ಹಿರಿಯನಿದ್ದೇನೆ. ನಾನು 9 ಬಾರಿ ವಿಧಾನಸಭೆಗೆ ಆರಿಸಿ ಬಂದಿದ್ದೇನೆ. ನಾನು ಈಗ ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿ ಅಲ್ಲ. ಪರಿಸ್ಥಿತಿ ಬಂದಾಗ ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ದಲಿತ ಸಚಿವರ ಔತಣಕೂಟ ಸಭೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಭೆ ಕರೆಯುವುದರಲ್ಲಿ ತಪ್ಪೇನಿದೆ? ಯಾರು ಬೇಕಾದರೂ ಔತಣಕೂಟ ಸಭೆ ಮಾಡಬಹುದು. ಅದಕ್ಕೂ ರಾಜಕೀಯಕ್ಕೂ ಏನು ಸಂಬಂಧ ಎಂದರು.

More articles

Latest article