ಕೊಪ್ಪಳ: ಪಕ್ಷದ ವರಿಷ್ಠ, ಮಾಜಿ ಮಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಳ್ಳಿಹಳ್ಳಿಗಳನ್ನು ಸುತ್ತಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಇತ್ತೀಚೆಗಷ್ಟೇ ಪಕ್ಷಕ್ಕೆ ಬಂದಿರುವ ರಮೇಶ್ ಜಾರಕಿಹೊಳಿ ಯಡಿಯೂರಪ್ಪ ಅವರನ್ನು ಕುರಿತು ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ರಮೇಶ್ ಜಾರಕಿಯೊಳಿ ಬಾಯಿ ಹಿಡಿತದಲ್ಲಿಟ್ಟುಕೊಳ್ಳಬೇಕು ಮತ್ತು ಎಚ್ಚರಿಕೆಯಿಂದ ಮಾತನಾಡಬೇಕು. ಅವರಿಗೆ ಏನಾದರೂ ಸಮಸ್ಯೆಗಳಿದ್ದಲ್ಲಿ ಹೈಕಮಾಂಡ್ ಜೊತೆ ಮಾತನಾಡಿಕೊಳ್ಳಲಿ. ಬಹಿರಂಗವಾಗಿ ಮಾತನಾಡುವುದು ಹೇಳಿಕೆ ನೀಡುವುದು ಸರಿಯಲ್ಲ. ಈ ರೀತಿ ಬಹಿರಂಗವಾಗಿ ಮಾತನಾಡುವುದರಿಂದ ಯಡಿಯೂರಪ್ಪ ಅವರ ಲಕ್ಷಾಂತರ ಅಭಿಮಾನಿಗಳಿಗೆ ನೋವಾಗುತ್ತದೆ. ಕಾರ್ಯಕರ್ತರು ಅಸಮಾಧಾನಗೊಂಡರೆ ರಮೇಶ ಓಡಾಡುವುದೇ ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನಂತರ ಅವರ ಬಗ್ಗೆ ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ. ಕೆಲವೇ ದಿನಗಳಲ್ಲಿ ಪಕ್ಷದಲ್ಲಿ ಎಲ್ಲವು ಸರಿಹೋಗುತ್ತದೆ ಎಂದು ತಿಳಿಸಿದರು.
ನಾನು ರಾಜ್ಯಾಧ್ಯಕ್ಷನಾದ ಬಳಿಕ ನಿರಂತರ ಹೋರಾಟ ಮಾಡುತ್ತಿದ್ದೇನೆ. ಅಲ್ಲೊಬ್ಬರು, ಇಲ್ಲೊಬ್ಬರು ಮನಬಂದಂತೆ ಮಾತನಾಡಿದರೆ ಅದಕ್ಕೆ ಉತ್ತರ ನೀಡುವಷ್ಟು ಸಮಯ ನನ್ನಲ್ಲಿಲ್ಲ ಎಂದರು.