ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಬಂಧನ

Most read

ಮುಂಬೈ:  ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ  ನುಗ್ಗಿ ಅವರಿಗೆ ಚಾಕುವಿನಿಂದ ಇರಿದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಗಳ ಒಳಗಾಗಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸಧ್ಯಕ್ಕೆ ಆತನ ವಿಚಾರಣೆ ನಡೆಸುತ್ತಿರುವ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅತ್ತ ಸೈಫ್ ಅಲಿ ಖಾನ್ ಅವರು ಹಲ್ಲೆಗೆ ಒಳಗಾಗಿರುವುದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿರುವ ಸೈಫ್ ಅಲಿ ಖಾನ್ ಚೇತರಿಸಿಕೊಳ್ಳುತ್ತಿದ್ದಾರೆ.

ಸದ್ಯ ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದಾರೆ. ದಾಳಿ ಮಾಡಿದ ಹಿಂದಿನ ಉದ್ದೇಶ ಏನು? ಆತ ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ? ಕೇವಲ ಹಣ ವಸೂಲಿ ಮಾತ್ರ ಈತನ ಉದ್ದೇಶವೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ವ್ಯಕ್ತಿಯ ಭಾವಚಿತ್ರವನ್ನು ಮುಂಬೈ ಪೊಲೀಸರು ಬಹಿರಂಗಪಡಿಸಿದ್ದರು. ಶಂಕಿತ ವ್ಯಕ್ತಿಯು ಟಿ-ಶರ್ಟ್​ ಮತ್ತು ಜೀನ್ಸ್ ಧರಿಸಿದ್ದ. ಗುರುವಾರ ನಸುಕಿನ 2.33 ಗಂಟೆ ವೇಳೆಗೆ ಈತ  ಸೈಫ್  ಅವರ ನಿವಾಸವನ್ನು ಪ್ರವೇಶಿಸಿದ್ದ.  ಸೈಫ್ ಅಲಿ ಖಾನ್ ನಿವಾಸದಲ್ಲಿ ಸೂಕ್ತ ಭದ್ರತೆ ಇರಲಿಲ್ಲ ಎಂದು ತಿಳಿದು ಬಂದಿದೆ. ಪ್ರವೇಶ ದ್ವಾರದಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಿರಲಿಲ್ಲ. ಹೀಗಾಗಿ ಯಾರು ಬರುತ್ತಾರೆ ಅಥವಾ ಹೋಗುತ್ತಾರೆ ಎನ್ನುವುದು ತಿಳಿದು ಬರುತ್ತಿರಲಿಲ್ಲ.

More articles

Latest article