ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಮಧ್ಯಪ್ರದೇಶದಲ್ಲಿ ಇಂದು ಬಂಧಿಸಲಾಗಿದೆ. ಕಳೆದ ಗುರುವಾರ ಮುಂಜಾನೆ ಸೈಫ್ ಅಲಿ ಖಾನ್ ಅವರ ಮುಂಬೈನಲ್ಲಿರುವ ನಿವಾಸಕ್ಕೆ ನುಗ್ಗಿದ ದುಷ್ಕರ್ಮಿಯೊಬ್ಬ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿರುವ ಸೈಫ್ ಅಲಿ ಖಾನ್ ಅವರು, ಲೀಲಾವತಿ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸದ್ಯ ಅವರು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.