ಬೆಂಗಳೂರು: ಹಳೆಯ ಪಿಂಚಣಿ ಯೋಜನೆಯನ್ನು (OPS ) ಜಾರಿಗೊಳಿಸುವಂತೆ ಫೆಬ್ರವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಕ್ಕೊತ್ತಾಯ ಧರಣಿ ನಡೆಸಲು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ತೀರ್ಮಾನಿಸಿದೆ. ಈ ಸಂಬಂಧ ಸಂಘದ ಅಧ್ಯಕ್ಷ ಶಾಂತರಾಮ ತೇಜಾ ಮತ್ತು ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಸಂಗಣ್ಣ ಅವರು ಪ್ರಕಟಣೆಯಲ್ಲಿ ತಿಳಿಸದ್ದಾರೆ.
ಅದುವರೆಗೂ ಅಂದರೆ ಜನವರಿ 20 ಜ.31 ರವರೆಗೆ ಪ್ರತಿಯೊಬ್ಬ ಹೊಸ ಪಿಂಚಣಿ(NPS) ನೌಕರರು ಹಳೆಯ ಪಿಂಚಣಿ ಯೋಜನೆಯನ್ನು (OPS ) ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಸೂಚನೆ ನೀಡಿದ್ದಾರೆ. ಈಗಾಗಲೇ NPS ನೌಕರರು ಪತ್ರ ಬರೆಯಲು ಆರಂಭಿಸಿದ್ದಾರೆ.
ತಾಲ್ಲೂಕು ಹಂತದಲ್ಲಿ ತಾಲ್ಲೂಕು ಅಧ್ಯಕ್ಷರು ಮತ್ತು ಜಿಲ್ಲಾ ಹಂತದಲ್ಲಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ಜನಪ್ರತಿನಿಧಿಗಳಿಗೆ OPS ಹಕ್ಕೊತ್ತಾಯದ ಮನವಿ ಸಲ್ಲಿಸಲು ಸಂಘ ತಿಳಿಸಿದೆ. ಹಾಗೆಯೇ ಫೆಬ್ರವರಿ 7 ರಂದು ನಡೆಯುವ ಧರಣಿಗೆ ತಾಲ್ಲೂಕು ಮತ್ತು ಜಿಲ್ಲಾ ಸಂಘಟನೆಗಳ ಬೆಂಬಲ ಕೋರಲು ಸಂಘ ನಿರ್ಧರಿಸಿದೆ. ಪ್ರತಿಭಟನೆ ಮೂಲಕ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಲಾಗುತ್ತದೆ. ಮುಂಬರುವ ಬಜೆಟ್ ನಲ್ಲಿ NPS ರದ್ದುಗೊಳಿಸಿ OPS ಜಾರಿಗೊಳಿಸಬೇಕು ಎಂದು ಅಂದು ಆಗ್ರಹಪಡಿಸಲಾಗುತ್ತದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.