ಬಾಗಲಕೋಟೆ: ಸಂಸತ್ ಅಧಿವೇಶನದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಪ್ರಗತಿಪರ ಹಾಗೂ ಮಹಿಳಾಪರ ಸಂಘಟನೆಗಳು ಕರೆ ನೀಡಿದ್ದ ಬಾಗಲಕೋಟೆ ನಗರ ಬಂದ್ ಯಶಸ್ವಿಯಾಗಿದೆ. ಬಂದ್ ಪ್ರಯುಕ್ತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿತ್ತು. ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಬಸ್ ಗಳ ಆಗಮನವಿಲ್ಲದೆ ಬಿಕೋ ಎನ್ನುತ್ತಿತ್ತು. ಆಟೋರಿಕ್ಷಾ ಮತ್ತು ಇತರ ಸಾರಿಗೆ ವಾಹನಗಳೂ ರಸ್ತೆಗಿಳಿದಿರಲಿಲ್ಲ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಒಟ್ಟಾರೆ ಬಂದ್ ಯಶಸ್ವಿಯಾಗಿದೆ ಎಂದು ದಲಿತ, ಹಿಂದುಳಿದ ಸಂಘಟನೆಗಳು ತಿಳಿಸಿವೆ.
ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರು ಅಮಿತ್ ಶಾರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಪಡಿಸಿದರು.