ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

Most read

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.  ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಪುನರ್‌ ಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತವಾಗಿವೆ.  ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು. ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದು ಹೇಳಿದರು.

ಗಾಂಧೀಜಿ, ಅಂಬೇಡ್ಕರ್ ಮತ್ತು  ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿಯಾಗಿದೆ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನಾರೋಗ್ಯದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ. ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಸಂಸದೆ ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.

More articles

Latest article