ಮದ್ಯ ಸೇವನೆ; 693 ವಾಹನ ಸವಾರರ ವಿರುದ್ಧ ಎಫ್‌ಐಆರ್

Most read


ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು, 693 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಜನವರಿ13 ರಿಂದ 19ರ ವರೆಗೆ ನಗರದ 50 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿವಿಧ ಮಾದರಿಯ 61,660 ವಾಹನಗಳನ್ನು ಪೊಲೀಸರು ತಪಾಸಣೆಗೆ ಒಳಪಡಿಸಿದ್ದಾರೆ. ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ವಾಹನಗಳ ಚಾಲಕರು ಹಾಗೂ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.

ಅತಿವೇಗದಿಂದ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ ಜ.19ರಂದು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸಂಚಾರ ಪೊಲೀಸರು 52 ಪ್ರಕರಣ ದಾಖಲಿಸಿಕೊಂಡು ರೂ.26 ಸಾವಿರ ದಂಡ ಸಂಗ್ರಹಿಸಿದ್ದಾರೆ. ದೋಷಪೂರಿತ ಸೈಲೆನ್ಸರ್‌ ಅಳವಡಿಸಿಕೊಂಡಿದ್ದವರ ವಿರುದ್ಧ 22 ಪ್ರಕರಣ ದಾಖಲಿಸಿಕೊಂಡು 11 ಸಾವಿರ ರೂಪಾಯಿ ದಂಡ ಸಂಗ್ರಹಿಸಿದ್ದಾರೆ.

More articles

Latest article