ಸೈಫ್‌ ಆಲಿ ಖಾನ್‌ ವಿರುದ್ಧ ಮಹಾರಾಷ್ಟ್ರ ಸಚಿವ ರಾಣೆ ವಾಗ್ದಾಳಿ

Most read

ಪುಣೆ: ಐದು ದಿನಗಳ ಹಿಂದೆ ಚಾಕು ಇರಿತಕ್ಕೆ ಒಳಗಾಗಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಮರಳಿರುವ ಬಾಲಿವುಡ್ ನಟ ಸೈಫ್‌ ಅಲಿ ಖಾನ್ ವಿರುದ್ಧ ಬಿಜೆಪಿ ಮುಖಂಡ, ಮಹಾರಾಷ್ಟ್ರ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ರಾಣೆ ವಾಗ್ಧಾಳಿ ನಡೆಸಿದ್ದಾರೆ. ಅವರ ಈ ಹೇಳಿಕೆ ವಿವಾದಕ್ಕೀಡಾಗಿದೆ.

ಬಹುಶಃ ಚಾಕು ಇರಿದ ಆರೋಪಿ ಸೈಫ್‌ ಆಲಿ ಖಾನ್‌ ಅವರನ್ನು ಕರೆದುಕೊಂಡು ಹೋಗಲು ಬಂದಿರಬಹುದು. ಇದು ಒಳ್ಳೆಯದೇ. ಕಸವನ್ನು ಎಸೆಯಬೇಕು ಎಂದು ರಾಣೆ ಹೇಳಿದ್ದಾರೆ. ಈ ಕುರಿತ ವಿಡಿಯೊವನ್ನು ಸುದ್ದಿಸಂಸ್ಥೆಯೊಂದು ಬಿತ್ತರಿಸಿದೆ. ಮುಂಬೈನಲ್ಲಿ ಬಾಂಗ್ಲಾದೇಶಿಗಳು ಏನು ಮಾಡುತ್ತಿದ್ದಾರೆ ನೋಡಿ, ಅವರು ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದಾರೆ. ಮೊದಲು ರಸ್ತೆಯ ಪಾದಾಚಾರಿ ರಸ್ತೆಗಳಲ್ಲಿ ನಿಲ್ಲುತ್ತಿದ್ದ ಅವರು ಈಗ ಮನೆಯ ಒಳಗೆ ಪ್ರವೇಶಿಸಲು ಪ್ರಾರಂಭಿಸಿದ್ದಾರೆ ಎಂದು ರಾಣೆ ಹೇಳಿದ್ದಾರೆ.

ಸೈಫ್‌ ಅವರು ಆಸ್ಪತ್ರೆಯಿಂದ ಹೊರ ಬರುವುದನ್ನು ನೋಡಿದರೆ ಅವರಿಗೆ ನಿಜವಾಗಿಯೂ ಚಾಕುವಿನಿಂದ ಗಾಯವಾಗಿದೆಯಾ? ಅಥವಾ ನಟಿಸುತ್ತಿದ್ದಾರಾ? ಎಂಬ ಅನುಮಾನ ಉಂಟಾಗುತ್ತಿದೆ. ಅವರು ನೃತ್ಯ ಮಾಡಿಕೊಂಡ ಅವರು ನಡೆದುಕೊಂಡು ಹೋಗುತ್ತಿದ್ದರು. ಶಾರುಖ್ ಖಾನ್, ಸೈಫ್ ಅಲಿ ಖಾನ್ ಅವರಂತಹ ‘ಖಾನ್’ಗಳು ಗಾಯಗೊಂಡಾಗ ಎಲ್ಲರೂ ಅವರ ಬಗ್ಗೆ ಮಾತನಾಡಲು ಪ್ರಾರಂಭಿಸುತ್ತಾರೆ. ಸುಶಾಂತ್ ಸಿಂಗ್ ರಜಪೂತ್ ಅವರಂತಹ ಹಿಂದೂ ನಟ ಚಿತ್ರಹಿಂಸೆಗೊಳಗಾದಾಗ ಯಾರೂ ಏನನ್ನೂ ಹೇಳಲು ಮುಂದೆ ಬರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಹಿಂದೂ ಕಲಾವಿದರಿಗೆ ತೊಂದರೆ ಎದುರಾದಾಗ ಜಿತೇಂದ್ರ ಅವ್ಹಾದ್, ಬಾರಾಮತಿಯ ತಾಯಿ ಸುಪ್ರಿಯಾ ಸುಳೆ ಯಾವತ್ತಾದರೂ ಚಿಂತಿಸುವುದನ್ನು ನೋಡಿದ್ದೀರಾ?…ಅವರು ಸೈಫ್ ಅಲಿ ಖಾನ್, ಶಾರುಖ್ ಖಾನ್‌ ಮಗ ಮತ್ತು ನವಾಬ್‌ ಮಲಿಕ್ ಬಗ್ಗೆ ಮಾತ್ರ ಚಿಂತಿಸುತ್ತಾರೆ. ಈ ಎಲ್ಲಾ ವಿಷಯಗಳ ಬಗ್ಗೆ ಹಿಂದೂಗಳು ಗಮನಹರಿಸಬೇಕು ಎಂದು ಹೇಳಿದ್ದಾರೆ.

More articles

Latest article