ಕೋಲಾರ: ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಶಿವ ಕುಮಾರ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟರಾಮ್ ಆಯ್ಕೆಯಾಗಿದ್ದಾರೆ.
ಪಿ ಎಲ್ ಡಿ ಬ್ಯಾಂಕ್ ನಲ್ಲಿ ಬಿಜೆಪಿ ಜೆಡಿಎಸ್ ಪಕ್ಷದ ಬೆಂಬಲಿತ 8 ನಿರ್ದೇಶಕರು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿತರು 6 ನಿರ್ದೇಶಕರು ಮತ್ತು 1 ನಾಮ ನಿರ್ದೇಶಕರು ಸೇರಿದಂತೆ ಒಟ್ಟು 15 ಜನ ನಿರ್ದೇಶಕರಿದ್ದಾರೆ.
ಇಂದು ಚುನಾವಣೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶಿವಕುಮಾರ್ ರವರು 8 ಮತ ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ವೆಂಕಟೇಶ್ ರವರು 7 ಮತ ಪಡೆದಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವೆಂಕಟರಾಮ್ ರವರು 8 ಮತ ಪಡೆದು ಆಯ್ಕೆಯಾದರೆ ಬಿಜೆಪಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅಂಬಿಕಾರವರು 7 ಮತ ಪಡೆದಿದ್ದಾರೆ. ಚುನಾವಣಾಧಿಕಾರಿಯಾಗಿ ಬ್ಯಾಂಕಿನ ವ್ಯವಸ್ಥಾಪಕ ಮುಸ್ತಾಕ್ ಅಹಮದ್ ಕಾರ್ಯನಿರ್ವಹಿಸಿದ್ದರು.
ಜೆಡಿಎಸ್ ಬಿಜೆಪಿ ಬೆಂಬಲಿತ ಪಕ್ಷದಲ್ಲಿ 8 ಜನ ನಿರ್ದೇಶಕರು ಆಯ್ಕೆಯಾಗಿದ್ದರೂ ಸಹ ಜೆಡಿಎಸ್ ನಿರ್ದೇಶಕರಾದ ಶಿವಕುಮಾರ್ ರವರು ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರಿಂದ ಕಾಂಗ್ರೆಸ್ ನಿರ್ದೇಶಕರ ಸಂಖ್ಯೆ 6 ರಿಂದ 7 ಕ್ಕೆ ಏರಿತ್ತು. ನಾಮನಿರ್ದೇಶನ ಸದಸ್ಯ ವೆಂಕಟರಾಮ್ ರವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕಿದ್ದರಿಂದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಆಯ್ಕೆಯಾಗಿದ್ದಾರೆ.