ಬೆಂಗಳೂರು: ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದು, ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ. ಬೆಂಗಳೂರಿನ ಪ್ರಮುಖ ಮೇಲ್ಸೇತುವೆಗಳಿಗೆ 12 ಸಾವಿರ ಕೋಟಿ ರೂ ಅಗತ್ಯವಿದೆ ಎಂದು ಅವರು ವಿವರಿಸಿದ್ದಾರೆ.
ರಾಜ ಕಾಲುವೆ ನಿರ್ವಹಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಬೆಂಗಳೂರಿನಲ್ಲಿ ಸದ್ಯ 1.5 ಕೋಟಿ ಜನಸಂಖ್ಯೆ ಇದ್ದು, ಬಿಸಿನೆಸ್ ಕಾರಿಡಾರ್ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ. ಹೀಗಾಗಿ ಈ ಬಾರಿಯ ಬಜೆಟ್ನಲ್ಲಿ ಬೆಂಗಳೂರಿಗೆ ಆದ್ಯತೆ ನೀಡಬೇಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.