ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

Most read

ಬೆಂಗಳೂರು: 66/11ಕೆವಿ ಬಿ.ಎಮ್.ಟಿ.ಸಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025, ಮಂಗಳವಾರ ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ್, ಶಾಂತಿನಗರ, ಬಿಟಿಎಸ್ ರೋಡ್‌, ರಿಚ್ಮಂಡ್ ಸರ್ಕಲ್, ರೆಸಿಡೆನೆಸ್ಸಿ ರೋಡ್, ಸುಧಾಮನಗರ, ಕೆ.ಎಚ್ ರೋಡ್,‌ ವೀಲ್ಸನ್ ಗಾರ್ಡನ್, ಡಬಲ್ ರೋಡ್, ಲಾಲ್‌ ಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶ

66/11ಕೆವಿ ಅರೇಹಳ್ಳಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 29.01.2025 ಬುಧವಾರ ರಂದು ಬೆಳಗ್ಗೆ 10 ರಿಂದ ಸಂಜೆ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ. ಅರೇಹಳ್ಳಿ, ಇಟ್ಟಮಡು, ಎಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿಜಿ ಲೇಔಟ್, ಭುವನೇಶ್ವರಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

More articles

Latest article