ಕುಂಭಮೇಳ ಕಾಲ್ತುಳಿತ; ಸಹಾಯವಾಣಿ ಆರಂಭಿಸಿದ ಕರ್ನಾಟಕ ಸರ್ಕಾರ

Most read

ಬೆಂಗಳೂರು: ರಾಜ್ಯ ಸರ್ಕಾರ ಕುಂಭಮೇಳ ಕಾಲ್ತುಳಿತ ದುರಂತ ಸಂಬಂಧ ಸಹಾಯವಾಣಿಯನ್ನು ಆರಂಭಿಸಿದೆ. ಕುಂಭಮೇಳಕ್ಕೆ ತೆರಳಿ ಕುಟುಂಬದ ಸದಸ್ಯರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಸರ್ಕಾರ ಕೋರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸಂಬಂಧಪಟ್ಟವರು ಈ ಸಹಾಯವಾಣಿಯನ್ನು ಸಂಪರ್ಕ ಮಾಡಬಹುದು:- 080-22340676

ಬಿಜೆಪಿ ಮುಖಂಡರ ನೆರವಿನಿಂದ ಬೆಳಗಾವಿ ಜಿಲ್ಲೆಯಲ್ಲಿ 300ಕ್ಕಿಂತ ಹೆಚ್ಚು ಜನ ಕುಂಭಮೇಳಕ್ಕೆ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಉತ್ತರ ಪ್ರದೇಶ ಸರ್ಕಾರ ಯಾವುದೇ ಮಾಹಿತಿ ನೀಡದ ಹಿನ್ನೆಲೆ ಕನ್ನಡಿಗರ ಹಿತರಕ್ಷಣೆಗಾಗಿ ಓರ್ವ ಐಎಎಸ್ ಅಧಿಕಾರಿ, ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಹಾಗೂ ಪೊಲೀಸ್ ಅಧಿಕಾರಿಯೊಬ್ಬರನ್ನೊಳಗೊಂಡ ಮೂರು ಜನರ ತಂಡವನ್ನು ಈಗಾಗಲೇ ಅಲ್ಲಿಗೆ ಕಳುಹಿಸಲಾಗಿದೆ ಎಂದರು.

ರಾಜ್ಯದ ವಿಪತ್ತು ನಿರ್ವಹಣಾ ತಂಡ ಉತ್ತರಪ್ರದೇಶ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದೆ. ಆದರೆ, ಉತ್ತರಪ್ರದೇಶ ಸರ್ಕಾರ ಪ್ರಯಾಗ್ರಾಜ್ ಕುಂಭಮೇಳ ದುರುಂತದಲ್ಲಿ ರಾಜ್ಯದ ಎಷ್ಟು ಜನ ಮೃತಪಟ್ಟಿದ್ದಾರೆ, ಎಷ್ಟು ಜನ ಗಾಯಾಳುಗಳಾಗಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಬೆಳಗಾವಿ ಜಿಲ್ಲಾಧಿಕಾರಿ ಸ್ವತಃ ಕುಂಭಮೇಳಕ್ಕೆ ತೆರಳಿದವರ ಕುಟುಂಬದವರನ್ನು ಸಂಪರ್ಕಿಸಿ ನಾಲ್ಕು ಜನ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಸಚಿವ  ಕೃಷ್ಣಭೈರೇಗೌಡ ಮಾಹಿತಿ ನೀಡಿದರು. 

More articles

Latest article