ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾವಣೆಯಲ್ಲಿ 7ನೇ ತರಗತಿ ಓದುತ್ತಿರುವ 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡು ಬಂದರೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಅಣ್ಣ ಮತ್ತು ತಂಗಿ ಇಬ್ಬರೂ ಒಂದೇ ಶಾಲೆಯಲ್ಲಿ ಓದುತ್ತಿದ್ದರು. ಮೃತ ವಿದ್ಯಾರ್ಥಿಯ ಪೋಷಕರು ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಸೋಮವಾರ ಎಂದಿನಂತೆಯೇ ಮಕ್ಕಳನ್ನು ಶಾಲೆಗೆ ಕಳುಹಿಸಿ ಪೋಷಕರು ಕೆಲಸಕ್ಕೆ ತೆರಳಿದ್ದರು. ಸಂಜೆ ಅಣ್ಣ, ತಂಗಿ ಮನೆಗೆ ಮರಳಿದ್ದಾರೆ. ಕೆಲಸದಿಂದ ಹಿಂತಿರುಗಿದ ತಾಯಿ ಮನೆಗೆ ಬಂದಾಗ ಕೋಣೆಯಲ್ಲಿ ಪುತ್ರ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದಾನೆ.ಕೂಡಲೇ ಆಕೆ ಮಗನನ್ನು ಆಸ್ಪತ್ರೆಗೆ
ಕರೆದೊಯ್ದಿದ್ದಾರೆ. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮೇಲ್ನೋಟಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಂತೆ ಕಾಣಿಸುತ್ತಿದೆ. ಶಾಲೆಗೆ ತೆರಳಿ ಶಿಕ್ಷಕರನ್ನು ವಿಚಾರಣೆ ನಡೆಸಲಾಗಿದ್ದು ಶಾಲೆಯಿಂದ ಯಾವುದೇ ಸಮಸ್ಯೆ ಉಂಟಾಗಿಲ್ಲ. ಆದರೆ ಮೊಬೈಲ್ ಅನ್ನು ಹೆಚ್ಚು ಬಳಸದಂತೆ ಕೆಲವು ದಿನಗಳ ಹಿಂದೆ ವಿದ್ಯಾರ್ಥಿಗೆ ತಿಳಿಸಿದ್ದಾಗಿ ಶಿಕ್ಷಕರು ತಿಳಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
7ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಆತ್ಮಹತ್ಯೆ