ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಡಿಎಲ್‌ ರದ್ದು; ಸಂಚಾರಿ ಪೊಲೀಸರ ಎಚ್ಚರಿಕೆ

Most read

ಬೆಂಗಳೂರು: ಪಾದಾಚಾರಿ ರಸ್ತೆ (ಫುಟ್‌ಪಾತ್) ಮೇಲೆ ವಾಹನ ಚಲಾಯಿಸುವವರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಇನ್ನು ಮುಂದೆ ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ  ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡಲು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ.

 ಪಾದಾಚಾರಿ ರಸ್ತೆಯಲ್ಲಿ ವಾಹನ ಚಲಾಯಿಸಿದರೆ ಡಿಎಲ್ ಅಮಾನತು ಮಾಡಲಾಗುತ್ತದೆ. ಇದರ ಜೊತೆಗೆ ಪ್ರಕರಣ ದಾಖಲಿಸಿ ಸೂಕ್ತ ದಂಡ ವಿಧಿಸಲಾಗುತ್ತದೆ ಎಂದುಎಚ್ಚರಿಸಿರುವ ಸಂಚಾರಿ ಪೊಲೀಸರು ಫುಟ್‌ಪಾತ್ ಇರುವುದು  ಪಾದಚಾರಿಗಳ ಬಳಕೆಗೆ ಅಲ್ಲಿ ವಾಹನ ಚಲಾಯಿಸುವಂತಿಲ್ಲ ಎಂದು ಸೂಚಿಸಿದ್ದಾರೆ.

ಪಾದಚಾರಿಗಳ ಸುಗಮ ಓಡಾಟಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕಠಿಣ ನಿಯಮ ಕೈಗೊಳ್ಳುತ್ತಿದ್ದಾರೆ. ಇತ್ತೀಚೆಗೆ ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ನಿಯಮ ಉಲ್ಲಂಘಿಸಿ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿಕೊಂಡು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಪಾದಚಾರಿಗಳಿಗೆ ಓಡಾಟಕ್ಕೆ ಕಿರಿಕಿರಿಯಾಗುತ್ತಿದೆ. ದ್ವಿಚಕ್ರ ವಾಹನಗಳಷ್ಟೇ ಅಲ್ಲದೆ  ಕೆಲವರು ಕಾರುಗಳನ್ನೂ ಚಲಾಯಿಸಿರುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ.

More articles

Latest article