ಮೈಸೂರು: ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲಾತಾಣದಲ್ಲಿ ಮುಸ್ಲಿಂ ಧರ್ಮಗುರುಗಳನ್ನು ಕುರಿತು ಅವಹೇಳಕಾರಿಯಾಗಿ ಪೋಸ್ಟ್ ಹಂಚಿಕೊಂಡಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ಮೈಸೂರಿನ ಕಲ್ಯಾಣಗಿರಿನಗರದ ನಿವಾಸಿ ಎಂದು ತಿಳಿದು ಬಂದಿದೆ.
ಈ ಪೋಸ್ಟ್ ಹಂಚಿಕೊಂಡಿದ್ದ ಯುವಕನನ್ನು ಬಂಧಿಸುವಂತೆ ಉದಯಗಿರಿ ಪೊಲೀಸ್ ಠಾಣೆ ಮುಂದೆ ಮುಸ್ಲಿಂ ಸಮುದಾಯದ ಜನರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಈ ವೇಳೆ ಪೊಲೀಸರು ಹಾಗೂ ಮುಸ್ಲಿಂ ಸಮುದಾಯದ ಯುವಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.
ಸಧ್ಯಕ್ಕೆ ಉದಯಗಿರಿ ಬಡಾವಣೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಯುವಕನನ್ನು ಬಂಧಿಸಿರುವ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ನಡೆದ ಘರ್ಷಣೆಯಲ್ಲಿ ಇನ್ಸ್‌ಪೆಕ್ಟರ್ ಸೇರಿದಂತೆ 14ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗೊಂಡಿದ್ದಾರೆ..
ಎಸಿಪಿ ಶಾಂತಮಲ್ಲಪ್ಪ, ನಜರಬಾದ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಹದೇವಸ್ವಾಮಿ ಸೇರಿದಂತೆ 14 ಮಂದಿ ಪೊಲೀಸರಿಗೆ ಕಲ್ಲಿನಿಂದ ಹೊಡೆದ ಗಾಯಗಳಾಗಿವೆ. 10ಕ್ಕೂ ಪೊಲೀಸ್ ವಾಹನಗಳ ಮೇಲೆ ಕಲ್ಲೂ ತೂರಾಟ. ಉದಯಗಿರಿ ಬಡಾವಣೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಘಟನಾ ಸ್ಥಳದಲ್ಲಿ ಎಸಿಪಿ ಗಜೇಂದ್ರ ಪ್ರಸಾದ್ ಮೊಕ್ಕಾಂ ಹೂಡಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಉದಯಗಿರಿ ಪೊಲೀಸ್ ಠಾಣೆಯ ಮುಂಭಾಗ ಸಾವಿರಾರು ಯುವಕರು ಜಮಾಯಿಸಿದ್ದರು.
ಉದಯಗಿರಿ ಪೊಲೀಸ್ ಠಾಣೆಯ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳದಲ್ಲಿ ಆರಕ್ಕೂ ಹೆಚ್ಚು ಕೆಎಸ್ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.