ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಶಿಕುಮಾರ್ (25), ಆಕಾಶ್ (23), ದರ್ಶನ್ (23) ಮೃತ ದುರ್ದೈವಿಗಳು. ಮೂವರೂ ಹನುಮನಮಟ್ಟಿ ಗ್ರಾಮದಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಈ ಅಪಘಾತ ಸಂಭವಿಸಿದೆ. ಆಕಾಶ್ ಮತ್ತು ದರ್ಶನ್ ಅಂತಿಮ ವರ್ಷದ ಬಿಎಸ್ಸಿ ವಿದ್ಯಾರ್ಥಿಗಳು. ಶಶಿಕುಮಾರ್ ಹನುಮನಮಟ್ಟಿ ಗ್ರಾಮದಲ್ಲಿನ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ; ನಾಲ್ವರು ಕಾರ್ಮಿಕರಿಗೆ ಗಾಯ:
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ನಿಡನೂರು ಬಳಿ ನಡೆದಿದೆ. 14 ಕಾರ್ಮಿಕರನ್ನು ಕೂಲಿ ಕೆಲಸಕ್ಕೆ ಕರೆದೊಯ್ತಿದ್ದಾಗ ವಾಹನ ಪಲ್ಟಿಯಾಗಿದೆ. ಗಾಯಾಳು ಕೂಲಿ ಕಾರ್ಮಿಕರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.