2030 ರೊಳಗೆ 7.5 ಲಕ್ಷ ಕೋಟಿ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿ ಗುರಿ:ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು: ನೂತನ ಕೈಗಾರಿಕಾ ನೀತಿ-2025, ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಳ್ಳುವ ಬೆಳವಣಿಗೆಯನ್ನು ಸೇರಿದಂತೆ ಕರ್ನಾಟಕದ ಮಹತ್ವಾಕಾಂಕ್ಷಿ ದೂರದೃಷ್ಟಿಯನ್ನು ಒತ್ತಿಹೇಳಿದೆ. ಉತ್ಪಾದನಾ ವಲಯದಲ್ಲಿ ಶೇ.12 ರಷ್ಟು ವಾರ್ಷಿಕ ಬೆಳವಣಿಗೆಯ ದರದ ಗುರಿಯನ್ನು ಹೊಂದಿದ್ದು, 2030 ರೊಳಗೆ 7.5 ಲಕ್ಷ ಕೋಟಿ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಜನೆಯ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಜಾಗತಿಕ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ 2025″ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾಗತಿಕ ಹೂಡಿಕೆದಾರರ ಸಮಾವೇಶ – ಇನೆವೆಸ್ಟ್ ಕರ್ನಾಟಕ-2025ರಲ್ಲಿ ಆಯೋಜಿಸಿರುವ ನಾವೀನ್ಯತೆಯ ಭವಿಷ್ಯ ಕುರಿತ ವಸ್ತುಪ್ರದರ್ಶನವು ಸುಮಾರು 40ಕ್ಕೂ ಹೆಚ್ಚು ಜಾಗತಿಕ ಕಂಪನಿಗಳು, ಸ್ಟಾರ್ಟ್ ಅಪ್ ಕಂಪನಿಗಳಿಂದ, ಡ್ರೋನ್ ತಂತ್ರಜ್ಞಾನ, ಅಂತರಿಕ್ಷ ತಂತ್ರಜ್ಞಾನ, ಆರೋಗ್ಯ ವಲಯ, ಕೃಷಿ ಹಾಗೂ ಆರೋಗ್ಯ ತಂತ್ರಜ್ಞಾನ ಮತ್ತು  ವೈಮಾನಿಕ ಮತ್ತು ರಕ್ಷಣಾ ವಲಯಗಳ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ವಲಯಗಳ ಕುರಿತು ಸ್ವಾಯತ್ತ ಪರಿಹಾರಗಳನ್ನು ಒದಗಿಸುತ್ತಿರುವುದನ್ನು ಬಿಂಬಿಸಲಿದೆ ಎಂದು ಹೇಳಿದರು.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೂ ಸೇರಿದಂತೆ ರಾಜ್ಯಾದ್ಯಂತ ಉತ್ತಮ ಸಂಪರ್ಕ ಹೊಂದಿರುವ ವಿಮಾನನಿಲ್ದಾಣಗಳನ್ನು ಹೊಂದಿರುವ ಕಾರಣ  ಕರ್ನಾಟಕ ವೈಮಾನಿಕ ಸಂಪರ್ಕದಲ್ಲಿಯೂ ಮುಂಚೂಣಿಯಲ್ಲಿದೆ. ಪ್ರಯಾಣಿಕರು ಮತ್ತು ಸರಕುಗಳಿಗೆ ಜಾಗತಿಕ ಕೇಂದ್ರವಾಗಿರುವ ಬೆಂಗಳೂರು ಮತ್ತು ಇತರೆ ನಿರ್ಮಾಣ ಹಂತದ ವಿಮಾನ ನಿಲ್ದಾಣಗಳು  ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಸಂಪರ್ಕವನ್ನು ಉತ್ತೇಜಿಸಲಿದೆ.  ಬೆಂಗಳೂರಿಗೆ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಸೂಕ್ತವಾದ ಸ್ಥಳವನ್ನು ಗುರುತಿಸುವ ಕಾರ್ಯ ಸಕ್ರಿಯವಾಗಿ ನಡೆದಿದೆ. ಬೆಂಗಳೂರಿನ ಜಾಗತಿಕ ಸಂಪರ್ಕ ಮತ್ತು ಆರ್ಥಿಕ ಸಾಮರ್ಥ್ಯವನ್ನು ಇದು ಇನ್ನಷ್ಟು ಉತ್ತೇಜಿಸಲಿದೆ ಎಂದು ತಿಳಿಸಿದರು.

ಹದಿನೈದು ಸಾವಿರಕ್ಕೂ ಹೆಚ್ಚು ಸ್ಟಾರ್ಟ್‍ಅಪ್ ಹಾಗೂ 40ಕ್ಕೂ ಹೆಚ್ಚು ಯೂನಿಕಾರ್ನ್ ಗಳನ್ನು ಹೊಂದಿರುವ ಕರ್ನಾಟಕ ಭಾರತದ ಅತಿದೊಡ್ಡ ಸ್ಟಾರ್ಟ್ ಅಪ್ ಹಬ್ ಮತ್ತು ಜಾಗತಿಕವಾಗಿ ಮೊದಲ ಐದರಲ್ಲಿ ಗುರುತಿಸಿಕೊಂಡಿದೆ. ಎಲಿವೇಟ್ 100 ಮತ್ತು ಬಿಯಾಂಡ್ ಬೆಂಗಳೂರು ನಂತಹ ಯೋಜನೆಗಳು ನಾವೀನ್ಯತೆಯನ್ನು ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಕೊಂಡೊಯ್ದು ಡಿಜಿಟಲ್ ಪರಿವರ್ತನೆಯಲ್ಲಿ ತನ್ನ ನಾಯಕತ್ವವನ್ನು ಒತ್ತಿ ಹೇಳುತ್ತದೆ ಎಂದರು.

 ಸೆಮಿಕಂಡಕ್ಟರ್ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ತನ್ನ ಸ್ಥಾನವನ್ನು ಭದ್ರಗೊಳಿಸಿಕೊಳ್ಳುತ್ತಿರುವ ಕರ್ನಾಟಕ ಇಂಟೆಲ್, ಟಿಎಸ್‍ಎಂಸಿ ಮತ್ತು ಮೈಕ್ರಾನ್ ಸಂಸ್ಥೆಗಳಿಂದ ಪ್ರಮುಖ ಹೂಡಿಕೆಗಳನ್ನು ಹೊಂದಿದೆ. ಭಾರತದ ಎಲೆಕ್ಟ್ರಾನಿಕ್ ಉತ್ಪನ್ನಗಳ ರಫ್ತಿನಲ್ಲಿ ಶೇ.60 ರಷ್ಟನ್ನು ಪೂರೈಸುವ ಮೂಲಕ ಕರ್ನಾಟಕ ನೆಕ್ಸ್ಟ್ ಜೆನ್ ಚಿಪ್ಸ್ ಹಾಗೂ ಸಾಧನಗಳ ಜಾಗತಿಕ ಪೂರೈಕೆದಾರ ಎನಿಸಿದೆ.  ಇನ್‍ಫೋಸಿಸ್, ವಿಪ್ರೋ, ಟಿಸಿಎಸ್, ಗೂಗಲ್, ಅಮೆಜಾನ್ ಮತ್ತು ಆಪಲ್ ನಂತಹ ಪ್ರಮುಖ ಟೆಕ್ ಕಂಪನಿಗಳಿಗೆ ನೆಲೆಯಾಗಿರುವ ಕರ್ನಾಟಕ ಭಾರತದ ಸಾಫ್ಟ್ ವೇರ್ ರಫ್ತಿಗೆ ಶೇ. 40 ರಷ್ಟು ಕೊಡುಗೆ ನೀಡುತ್ತಿದೆ. ಡಿಜಿಟಲ್ ಅರ್ಥಿಕತೆಯನ್ನು ಭವಿಷ್ಯಕ್ಕೆ ಸೂಕ್ತವಾಗುವ ರೀತಿಯಲ್ಲಿ ಅಣಿಮಾಡಲು ಕರ್ನಾಟಕವು ಎಐ ಆಡಳಿತ, ಬ್ಲಾಕ್ ಚೈನ್ ಅಳವಡಿಕೆ ಮತ್ತು ಕ್ಲೌಡ್ ಕಂಪ್ಯೂಟಿಂಗ್ ಗಳಲ್ಲಿ ಹೂಡಿಕೆ ಮಾಡುತ್ತಿದೆ ಎಂದು ಹೇಳಿದರು.

ತನ್ನ ಸುಭದ್ರ ನೀತಿಗಳು, ವಿಶ್ವ ಮಟ್ಟದ ಮೂಲಸೌಕರ್ಯ, ಕೌಶಲ್ಯಭರಿತ ಸಂಪನ್ಮೂಲ ಮತ್ತು ಸುಸ್ಥಿರತೆಯ ಮೇಲಿನ ತನ್ನ ಗಮನದಿಂದಾಗಿ ಭವಿಷ್ಯಕ್ಕೆ ಸಿದ್ಧವಾಗಿರುವ   ಹೂಡಿಕೆಗಳಿಗೆ ಕರ್ನಾಟಕ ಸೂಕ್ತವಾದ ತಾಣವಾಗಿದೆ. ಬೆಳವಣಿಗೆಯನ್ನು ಉತ್ತೇಜಿಸುವ ಪರಿಸರ ವ್ಯವಸ್ಥೆಯನ್ನು ನಾವು ನಿರ್ಮಿಸುತ್ತಿದ್ದು, ಉದ್ಯೋಗ ಸೃಜನೆ ಮತ್ತು ಜಾಗತಿಕ ಮಹತ್ವಾಕಾಂಕ್ಷೆಯನ್ನು  ಬಲಪಡಿಸುತ್ತಿದ್ದೇವೆ. ಡಿಜಿಟಲೀಕರಣಗೊಂಡಿರುವ ನಮ್ಮ ವ್ಯವಸ್ಥೆ, ಸುವ್ಯವಸ್ಥಿತ ಪ್ರಕ್ರಿಯೆಗಳು, ಸದೃಢ ಬೆಂಬಲಿತ ಕಾರ್ಯವಿಧಾನಗಳು ಸರಳೀಕೃತ ವ್ಯವಹಾರವನ್ನು  ಖಾತ್ರಿಪಡಿಸುತ್ತವೆ. ಐಟಿ ಉತ್ಪಾದನೆಯಿದ ಹಿಡಿದು, ಡೀಪ್‍ಟೆಕ್ ನಿಂದ ನವೀಕರಿಸಬಹುದಾದ ಇಂಧನದವರೆಗೆ, ಏರೋಸ್ಪೇಸ್ ನಿಂದ ಆರೋಗ್ಯದವರೆಗೆ, ಕರ್ನಾಟಕ ಯಶಸ್ಸನ್ನು ಪೋಷಿಸಲು ಹಾಗೂ   ಈ ದಾರಿಯಲ್ಲಿ ಮುನ್ನಡೆಯಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.

More articles

Latest article