ಮೈಸೂರು ಗಲಭೆ; ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪಿಗಳ ಬಂಧನ

Most read

ಮೈಸೂರು: ಮೈಸೂರು ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.  ಶಾಂತಿನಗರದ ಸೈಯದ್ ಸುಹೇಲ್, ರಹೀಲ್ ಪಾಷಾ, ಅಯಾನ್, ಸತ್ಯನಗರದ ನಿವಾಸಿ ಏಜಾಜ್, ಮೈಸೂರಿನ ಗೌಸಿಯಾನಗರದ ನಿವಾಸಿ ಸೈಯದ್ ಸಾದಿಕ್, ರಾಜೀವ್​ ನಗರದ ಸಾದಿಕ್ ಪಾಷಾ ಅಲಿಯಾಸ್ ಸಾದಿಕ್, ಅರ್ಬಾಜ್ ಷರೀಫ್, ಶೋಹೆಬ್ ಪಾಷಾ ಬಂಧಿತ ಆರೋಪಿಗಳು. ಮತ್ತಷ್ಟು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ನಿನ್ನೆ ರಾತ್ರಿ ಟವರ್​ ಲೊಕೇಶನ್​​ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋಗಿದ್ದರು. ಆದರೆ ಪೊಲೀಸರು ಬಂಧಿಸಬಹುದೆಂಬ ಭಯದಿಂದ ಆರೋಪಿಗಳು ಮೊಬೈಲ್‌ ಗಳನ್ನು ಇದ್ದ ಮನೆಯಲ್ಲೇ ಬಿಟ್ಟು ಪರಾರಿಯಾಗಿದ್ದರು. ಇವರ ಬಂಧನಕ್ಕೆ ಹುಡುಕಾಟ ನಡೆದಿದೆ. ಉದಯಗಿರಿ ಠಾಣೆ ರಸ್ತೆಯಲ್ಲಿನ 10ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಡಿವಿಆರ್ ವಶಕ್ಕೆ ಪಡೆದು ಪರಿಶೀಲನೆ ಮಾಡುತ್ತಿದ್ದಾರೆ. ಗಲಭೆಗೆ ಮುಫ್ತಿ ಮುಷ್ತಾಕ್ ಮಕ್ಬೋಲಿ ಎಂಬಾತ ಮಾಡಿದ ಪ್ರಚೋದನಾಕಾರಿ ಭಾಷಣವೇ ಕಾರಣವಾಯಿತೇ ಎಂಬ ಬಗ್ಗೆಯೂ ತನಿಖೆ ಕೈಗೊಂಡಿದ್ದಾರೆ. ಗಲಭೆಗೂ ಮುನ್ನ ಮುಷ್ತಾಕ್ ಮತನಾಡಿರುವ ಆಡಿಯೋ ವೈರಲ್ ಆಗಿದೆ. ನಾವು ಪ್ರಾಣ ಬೇಕಾದರೂ ಕೊಡುತ್ತೇವೆ. ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್​​​ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ ಆತನನ್ನು ನೇಣಿಗೆ ಹಾಕಬೇಕು ಎಂದು ಮೈಕ್​ನಲ್ಲಿ ಕೂಗಿದ್ದಾನೆ. ತಲೆ ಮರೆಸಿಕೊಂಡಿರುವ ಈತನಿಗಾಗಿಯೂ ಪೊಲೀಸರು ಶೋಧ ನಡೆಸಿದ್ದಾರೆ.

More articles

Latest article