ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ, ವಾಗ್ದಾಳಿ

Most read

ರಾಯ್‌ಬರೇಲಿ: ತಮ್ಮ ಲೋಕಸಭಾ ಕ್ಷೇತ್ರ ರಾಯ್‌ ಬರೇಲಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಲೆ ಏರಿಕೆ ಸೇರಿದಂತೆ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯತ್ನಿಸುತ್ತಿದ’ ಎಂದು ರಾಹುಲ್ ಗಾಂಧಿ ಅಪಾದಿಸಿದ್ದಾರೆ.

ಚುರುವಾ ಗಡಿಯಲ್ಲಿ ಹನುಮಾನ್ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಬಛರಾಂವದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಅವರು
ಮಾತನಾಡಿದರು.

ಹಣದುಬ್ಬರ ಗಣನೀಯವಾಗಿ ಏರಿಕೆಯಾಗಿದೆ. ಆದರೆ ಮೋದಿ ಸರ್ಕಾರ ಬಂಡವಾಳಶಾಹಿಗಳನ್ನು ಉತ್ತೇಜಿಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

More articles

Latest article