ಮಧ್ಯಪ್ರದೇಶ: ನೃತ್ಯಗಾರ್ತಿ ಮೇಲೆ ಸಾಮೂಹಿಕ ಅತ್ಯಾಚಾರ

Most read

ಮಧ್ಯಪ್ರದೇಶ: ನೃತ್ಯ ಕಾರ್ಯಕ್ರ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನೃತ್ಯಗಾರ್ತಿ ಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತ ನೃತ್ಯಗಾರ್ತಿ ಯನ್ನು ಅಪಹರಿಸಿದ ಆರೋಪಿಗಳು ಜಿಲ್ಲೆಯಿಂದ ಸುಮಾರು 30 ಕಿ.ಮೀ ದೂರದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಗುರುವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ನೃತ್ಯ ಪ್ರದರ್ಶನವನ್ನು ಮುಗಿಸಿ, ಮನೆಗೆ ಹಿಂತಿರುಗುತ್ತಿದ್ದ ವೇಳೆ, ಬೈಕ್‌ಗಳಲ್ಲಿ ಬಂದ ಆರು ಮಂದಿ, ನನ್ನನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಅತ್ಯಾಚಾರ ಎಸಗಿದ ಆರೋಪಿಗಳು, ಆಕೆಯನ್ನು ಅರಣ್ಯ ಪ್ರದೇಶದಲ್ಲಿಯೇ ಬಿಟ್ಟು, ಮೊಬೈಲ್‌ ಅನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಗಾಯಗೊಂಡಿದ್ದ ಆಕೆ, ಅಲ್ಲಿನ ಸ್ಥಳೀಯರ ಸಹಾಯ ಪಡೆದು ಮನೆಗೆ ಮರಳಿದ್ದಾರೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತೆ ನೀಡಿದ ದೂರನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

More articles

Latest article