ಕುಡಿಯುವ ನೀರನ್ನು ಪೋಲು ಮಾಡುತ್ತಿದ್ದವರಿಗೆ ದಂಡದ ಬಿಸಿ ಮುಟ್ಟಿಸಿದ ಜಲ ಮಂಡಲಿ

Most read

ಬೆಂಗಳೂರು: ಬೇಸಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಅನಾವಶ್ಯಕವಾಗಿ ಪೋಲು ಮಾಡುವವರ ವಿರುದ್ಧ ದಂಡ ವಿಧಿಸುವ ಅಭಿಯಾನವನ್ನು ಬೆಂಗಳೂರು ಜಲಮಂಡಳಿ ಆರಂಭಿಸಿದೆ. ಎಚ್ಚರಿಕೆ ನೀಡಿದ ನಂತರವೂ ನೀರನ್ನು ಹಾಳು ಮಾಡುತ್ತಿದ್ದ 112 ಪ್ರಕರಣಗಳನ್ನು ದಾಖಲಿಸಿ 5.60 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ.

ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸದಂತೆ ಜಲಮಂಡಳಿ ಕಳೆದ ವಾರ ಸುತ್ತೋಲೆ ಹೊರಡಿಸಿತ್ತು. ನೀರು ಪೋಲು ಮಾಡುವವರ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ ಅಡಿಯಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.
ಆದರೂ ಕುಡಿಯುವ ನೀರನ್ನು ಅನ್ಯ ಉದ್ಧೇಶಗಳಿಗೆ ಬಳಸುತ್ತಿದ್ದ ನಾಗರೀಕರನ್ನು ಪತ್ತೆಹಚ್ಚಿ ದಂಡ ವಿಧಿಸಲಾಗಿದೆ.

ಫೆಬ್ರುವರಿ 23 ರವರೆಗೆ 112 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ ದಕ್ಷಿಣ ವಲಯದಲ್ಲಿ ಹೆಚ್ಚು ಪ್ರಕರಣಗಳು (33) ದಾಖಲಾಗಿವೆ. ಉತ್ತರ ವಲಯದಲ್ಲಿ 23, ಪಶ್ಚಿಮ ವಲಯದಲ್ಲಿ 28, ಪೂರ್ವ ವಲಯದಲ್ಲಿ 28 ಪ್ರಕರಣಗಳು ದಾಖಲಾಗಿವೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್‌ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಅಂತರ್ಜಲದ ಮಟ್ಟ ಕುಸಿಯಬಹುದು ಎಂದು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಆದ್ದರಿಂದ ದಂಡ ವಿಧಿಸುವ ಕ್ರಮವನ್ನು  ಜಲಮಂಡಳಿ ಕೈಗೊಳ್ಳುತ್ತಿದೆ. ಬೆಂಗಲೂರಿನ ನಾಗರೀಕರು ಕುಡಿಯುವ ನೀರನ್ನು
ಪೋಲು ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಂಡ ವಿಧಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

More articles

Latest article