ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ಸಣ್ಣ ಕತೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಗೆ ಪರಿಗಣಿಸಲು ಸಿದ್ಧವಾಗಿರುವ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್ ಅವರಿಗೆ ಎಕ್ಸ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯಕ್ಕೆ ಹೆಮ್ಮೆಯ ಕ್ಷಣ! ಬಾನು ಮುಷ್ತಾಕ್ ಅವರ ಕನ್ನಡ ಸಣ್ಣ ಕಥಾ ಸಂಕಲನವು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ದೀರ್ಘ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ನಮ್ಮ ಭಾಷೆ ಮತ್ತು ಸಂಸ್ಕೃತಿಗೆ ನಿಜವಾದ ಗೌರವ! ಈ ಮನ್ನಣೆಯು ಕನ್ನಡ ಕಥೆ ಹೇಳುವಿಕೆಯ ಜಾಗತಿಕ ಮೆಚ್ಚುಗೆಗೆ ದಾರಿ ಮಾಡಿಕೊಡುತ್ತದೆ. ಹೃತ್ಪೂರ್ವಕ ಅಭಿನಂದನೆಗಳು! ಎಂದು ಹೇಳಿದ್ದಾರೆ.